ಪಿಯುಸಿ ಮುಗಿದವರಿಗೆ ಕರ್ನಾಟಕ ಸರ್ಕಾರದಿಂದ ಗ್ರೂಪ್ ‘ಸಿ’ ಕಲ್ಯಾಣ ಸಂಘಟಕರು ಹುದ್ದೆಗಳಿಗೆ ಅರ್ಜಿ ಆಹ್ವಾನ: Sainik Welfare Recruitment 2023
ಕರ್ನಾಟಕ ಸರ್ಕಾರದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು ಕರ್ನಾಟಕ ಸರ್ಕಾರದ ಸೈನಿಕ ಕಲ್ಯಾಣ & ಪುನರ್ವಸತಿ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಕಲ್ಯಾಣ ಸಂಘಟಕರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆಫ್ಲೈನ್ ಮುಖಾಂತರ ಅರ್ಜಿ ಆರಂಭವಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 04-08-2023 ಆಗಿರುತ್ತದೆ. ಒಟ್ಟು 14 ಹುದ್ದೆಗಳ ನೇರ ನೇಮಕಾತಿ ನಡೆಯುತ್ತಿದ್ದು ಅದರ ಅಧಿಸೂಚನೆಯನ್ನು ಇಲಾಖೆಯು ಬಿಡುಗಡೆಗೊಳಿಸಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು Speed Post/ Register Post ಮುಖಾಂತರ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ…
ಕರ್ನಾಟಕ ಸರ್ಕಾರದ ಸೈನಿಕ ಕಲ್ಯಾಣ & ಪುನರ್ವಸತಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಹುದ್ದೆಗಳ ವಿವರ/ Post Details:
ಪರಿಶಿಷ್ಟ ಜಾತಿ – 02 ಹುದ್ದೆಗಳು |
ಪರಿಶಿಷ್ಟ ಪಂಗಡ – 01 ಹುದ್ದೆ |
ಪ್ರವರ್ಗ 1 – 01 ಹುದ್ದೆ |
ಪ್ರವರ್ಗ 2ಎ – 02 ಹುದ್ದೆಗಳು |
ಪ್ರವರ್ಗ 2ಬಿ- 01 ಹುದ್ದೆ |
ಸಾಮಾನ್ಯ ವರ್ಗ- 07 ಹುದ್ದೆಗಳು |
ವೇತನ/ Salary
ವೇತನ ಶ್ರೇಣಿ: ರೂ. 21400-42000
ಕರ್ನಾಟಕ ಸರ್ಕಾರದ ವೇತನ ನಿಯಮಾವಳಿಗಳ ಪ್ರಕಾರ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ದ್ವಿತೀಯ ಪಿಯುಸಿ/ 12 ನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
15 ವರ್ಷಗಳ ಕಾಲ ಭೂಸೇನೆ/ ಏರ್ಫೋರ್ಸ್/ ನೇವಿಯಲ್ಲಿ ಕಾರ್ಯನಿರ್ವಹಿಸಿ ಸೇವೆಯಿಂದ ಬಿಡುಗಡೆ ಹೊಂದಿರುವ ಮಾಜಿ ಸೈನಿಕರಾಗಿರಬೇಕು.
ಅರ್ಜಿ ಶುಲ್ಕ/ Application Fees:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವಯೋಮಿತಿ/ Age limit:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಗರಿಷ್ಟ 50 ವರ್ಷಗಳನ್ನು ಮೀರಿರಬಾರದು.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ
ಸ್ಪರ್ಧಾತ್ಮಕ ಪರೀಕ್ಷೆಯ ಸಾಮಾನ್ಯ ಪತ್ರಿಕೆ 1 & ಪತ್ರಿಕೆ 2 ಗಳನ್ನು ಹೊಂದಿದ್ದು, ಪ್ರತಿಯೊಂದು ಪತ್ರಿಕೆಯು 100 ಅಂಕಗಳನ್ನು ಹೊಂದಿರುತ್ತದೆ. ಒಟ್ಟು 200 ಅಂಕಗಳಿಗೆ ಪರೀಕ್ಷೆ ಇರುತ್ತದೆ.
ಪರೀಕ್ಷೆಯಲ್ಲಿ ಋಣಾತ್ಮಕ ಮೌಲ್ಯಮಾಪನವಿದ್ದು ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದು ಭಾಗ ಅಂಕಗಳನ್ನು ಕಳೆಯಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 04.08.2023 ರ ಒಳಗಾಗಿ ಅಧ್ಯಕ್ಷರು, ಇಲಾಖಾ ನೇಮಕಾತಿ ಸಮಿತಿ, ಸೈನಿಕ ಕಲ್ಯಾಣ & ಪುನರ್ವಸತಿ ಇಲಾಖೆ, #58, ಫೀಲ್ಡ್ ಮಾರ್ಷಲ್, ಕೆ.ಎಂ ಕಾರ್ಯಪ್ಪ ಭವನ, ಫಿಲ್ಡ್ ಮಾರ್ಷಲ್ ಕೆಎಂ ಕಾರ್ಯಪ್ಪ ರಸ್ತೆ, ಬೆಂಗಳೂರು-560025 ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 13-07-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:04-08-2023
Important Links/ ಪ್ರಮುಖ ಲಿಂಕುಗಳು:
Pingback: KEA ಯಿಂದ ಆಹಾರ ಇಲಾಖೆ ಸೇರಿ 4 ಇಲಾಖೆಗಳಲ್ಲಿ ಖಾಲಿ ಇರುವ 670 ಹುದ್ದೆಗಳಿಗೆ ಅರ್ಜಿ ಆಹ್ವಾನ: KEA 4 Department Application date notice - KPSC Jobs
ಸೂಪರ್