ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ನಿರ್ದೇಶಕರು ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: ASRB Recruitment Notification 2024

Click here to Share:

ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ನಿರ್ದೇಶಕರು ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: ASRB Recruitment Notification 2024

ಕೇಂದ್ರ ಕೃಷಿ ಇಲಾಖೆಯ ಅಡಿಯಲ್ಲಿ ಬರುವ ಕೃಷಿ ವಿಜ್ಞಾನ ನೇಮಕಾತಿ ಮಂಡಳಿಯಿಂದ (ASRB) ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ASRB ಯಲ್ಲಿ ಖಾಲಿ ಇರುವ 21 ಸಹಾಯಕ ನಿರ್ದೇಶಕರು ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 02-05-2024 ಕೊನೆಯ ದಿನಾಂಕವಾಗಿದ್ದು, ಆಸಕ್ತರು ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.  ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ & ಲೆಕ್ಕಪತ್ರ ಇಲಾಖೆಯಿಂದ ರಾಜ್ಯ ವೃಂದದಲ್ಲಿನ ಗ್ರೂಪ್ ಎ & ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನ

Agricultural Scientists Recruitment Board ನಿಂದ Assistant Director ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

 ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 9000 ಹುದ್ದೆಗಳ ಬೃಹತ್ ಭರ್ತಿಗೆ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಪರಿಶಿಷ್ಟ ಜಾತಿ – 11
ಪರಿಶಿಷ್ಟ ಪಂಗಡ – 01
ಓಬಿಸಿ – 04
ಆರ್ಥಿಕವಾಗಿ ಹಿಂದೂಳಿದ ವರ್ಗ – 02
ಸಾಮಾನ್ಯ ವರ್ಗ – 11
ಒಟ್ಟು ಹುದ್ದೆಗಳು – 21

ವೇತನ/ Salary

ಕೇಂದ್ರ ಸರ್ಕಾರದ 7ನೇ ವೇತನ ಆಯೋಗದಂತೆ ಲೆವೆಲ್ 10 ನೇ ಶ್ರೇಣಿಯಲ್ಲಿ ರೂ. 56100-177500 ಮೂಲ ವೇತನ ಶ್ರೇಣಿ ನಿಗದಿಪಡಿಸಲಾಗಿದೆ.

ಈ ವೇತನದ ಜೊತೆಗೆ ಗ್ರೇಡ್ ಪೇ, ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ವಿಶ್ವವಿದ್ಯಾಲಯದಿಂದ ಇಂಗ್ಲೀಷ್ ಅಥವಾ ಹಿಂದಿ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು.

ಅರ್ಜಿ ಶುಲ್ಕ/ Application Fees:

ಸಾಮಾನ್ಯ/ OBC/ EWS ಅಭ್ಯರ್ಥಿಗಳು ರೂ 1000/- ಪಾವತಿಸಬೇಕು

ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ/ ಮಹಿಳೆ/ ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

ವಯೋಮಿತಿ/ Age limit: (As on Closing date)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 35 ವರ್ಷ ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ

ಇತರೆ ಹಿಂದೂಳಿದ ವರ್ಗ: 03 ವರ್ಷ

ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ & ಸಂದರ್ಶನವನ್ನು ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಅರ್ಹ & ಆಸಕ್ತ ಅಭ್ಯರ್ಥಿಗಳು ಈ  ನೇಮಕಾತಿಗಾಗಿ ಆನ್ಲೈನ್  ಮೂಲಕ ಅರ್ಜಿಗಳನ್ನು ದಿನಾಂಕ 03.04.2024 ರಿಂದ 02.05.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ASRB ವೆಬ್ ಸೈಟ್ https://bharatkosh.gov.in  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ರೈಲು ಗಾಲಿ ಕಾರ್ಖಾನೆಯಲ್ಲಿ ಖಾಲಿ ಇರುವ 192 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 03-04-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02-05-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :


Click here to Share:
Scroll to Top