ಕರ್ನಾಟಕ ವಿಧಾನಪರಿಷತ್ತಿನ ಸಚಿವಾಲಯದಲ್ಲಿ ಖಾಲಿ ಇರುವ 32 ಹುದ್ದೆಗಳಿಗೆ ಅರ್ಜಿ ಆಹ್ವಾನ: KLC Direct Recruitment 2024
ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ಉಳಿಕೆ ವೃಂದ & ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದದಲ್ಲಿ ಖಾಲಿ ಇರುವ ವಾಹನಾ ಚಾಲಕ & ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. KLC ನಲ್ಲಿ ಖಾಲಿ ಇರುವ 32 ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು 05-04-2024 ರ ಒಳಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
ರಾಜ್ಯ & ಸ್ಥಳೀಯ ವೃಂದದಲ್ಲಿ 384 ಕೆಎಎಸ್ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: KPSC KAS Jobs 2024
Karnataka Legislative Council ನಲ್ಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಹುದ್ದೆಗಳ ವಿವರ/ Post Details:
ವಾಹನಾ ಚಾಲಕರು- 03 |
ಗ್ರೂಪ್ ಡಿ ಹುದ್ದೆಗಳು- 29 |
ಒಟ್ಟು ಹುದ್ದೆಗಳು- 32 |
ವೇತನ/ Salary Scale:
ವಾಹನಾ ಚಾಲಕರು: ವೇತನ ಶ್ರೇಣಿ: 21400-42000(ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಗ್ರೂಪ್ ಡಿ ಹುದ್ದೆಗಳು: ವೇತನ ಶ್ರೇಣಿ: 17000-28950(ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ವಾಹನಾ ಚಾಲಕರು:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಯು ಕನಿಷ್ಟ ಹತ್ತನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಅಥವಾ ತತ್ಸಮಾನವನ್ನು ಉತ್ತೀರ್ಣ ಹೊಂದಿರಬೇಕು
ಮೊಟಾರು ಕಾರು/ ಭಾರಿ ವಾಹನಾ ಚಾಲನೆಯ ಪರವಾನಗಿಯನ್ನು ಹೊಂದಿರಬೇಕು.
ಗ್ರೂಪ್ ಡಿ ಹುದ್ದೆಗಳು:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಯು ಕನಿಷ್ಟ ಹತ್ತನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಅಥವಾ ತತ್ಸಮಾನವನ್ನು ಉತ್ತೀರ್ಣ ಹೊಂದಿರಬೇಕು
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ/ Application Fees:
ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ: ರೂ. 600/-
ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ : ರೂ. 300/-
ಪ.ಜಾ/ ಪಪಂ/ ಕೆ1 / ಅಂಗವಿಕಲ ಅಭ್ಯರ್ಥಿಗಳಿಗೆ: 50/-
ರೂ. 500/- ಪ್ರಕ್ರಿಯೆ ಶುಲ್ಕ ಮಾತ್ರ
ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಡಿಡಿ ಮುಖಾಂತರ ಪಾವತಿ ಮಾಡಬಹುದು.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 05.04.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಕಾರ್ಯದರ್ಶಿ, ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯ, ಅಂಚೆ ಪೆಟ್ಟಿಗೆ ಸಂಖ್ಯೆ- 5079 ವಿಧಾನಸೌಧ, ಬೆಂಗಳೂರು- 560001 ಇವರ ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ರೈಲ್ವೇ ರಕ್ಷಣಾ ಪಡೆ (RPF) ನಲ್ಲಿ ಖಾಲಿ ಇರುವ 4650 ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 04-03-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 05-04-2024
Important Links/ ಪ್ರಮುಖ ಲಿಂಕುಗಳು:
ಅರ್ಜಿ ಸಲ್ಲಿಸಿ/ Apply Online
Pingback: ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ಖಾಲಿ ಇರುವ ಕ್ಲರ್ಕ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ| Karnataka HC Clerk Jobs 2024 - KPSC Jobs
Pingback: ರಾಷ್ಟ್ರೀಯ ಗ್ರಾಮೀಣ ಮಿಷನ್ ನಲ್ಲಿ ಖಾಲಿ ಇರುವ 3885 ಕಂಪ್ಯೂಟರ್ ಆಪರೇಟರ್, ಲೆಕ್ಕಿಗ ಸೇರಿ ವಿವಿಧ ಹುದ್ದೆಗಳಿಗೆ ಅರ
Pingback: ರಾಜ್ಯ ಸರ್ಕಾರದ ಈ ಸಂಸ್ಥೆಯಲ್ಲಿ ಖಾಲಿ ಇರುವ ಕಿರಿಯ ಸಹಾಯಕ & ಸಹಾಯಕ ಗ್ರಂಥಪಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ: