KEA ಯಿಂದ 5 ಇಲಾಖೆಗಳಲ್ಲಿ ಖಾಲಿ ಇರುವ 670 ಹುದ್ದೆಗಳ ನೇಮಕಾತಿ: ಆಯ್ಕೆ ಪಟ್ಟಿ ಪ್ರಕಟ ಪ್ರಕಟ: KEA 5 Dept. Provisional List 2024
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರ್ನಾಟಕ ಸರ್ಕಾರದ ವಿವಿಧ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ 2023ರ ಅಕ್ಟೋಬರ್ & ನವೆಂಬರ್ ತಿಂಗಳಲ್ಲಿ ಹೊರಡಿಸಲಾಗಿದ್ದ ಅಧಿಸೂಚನೆಯ ಅನುಸಾರ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ ಪ್ರಸ್ತುತ ತಾತ್ಕಾಲಿಕ ಫಲಿತಾಂಶದ ಕುರಿತಂತೆ ಮಹತ್ವದ ಪ್ರಕಟಣೆಯನ್ನು ಹೊರಡಿಸಲಾಗಿದೆ. ರಾಜ್ಯ ಸರ್ಕಾರದ 4 ಇಲಾಖೆ/ ಸಂಸ್ಥೆಗಳಲ್ಲಿ ಖಾಲಿ ಇರುವ 650 ಕ್ಕೂ ಹೆಚ್ಚು ಹುದ್ದೆಗಳ ಭರ್ತಿ ಕುರಿತಂತೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ತಾತ್ಕಾಲಿಕ ಆಯ್ಕೆಪಟ್ಟಿಗೆ ಸಂಬಂಧಿಸಿದಂತೆ ಯಾವುದಾದರೂ ಆಕ್ಷೇಪಣೆ ಇದ್ದರೇ ನಿಗದಿತ ದಿನಾಂಕದ ಒಳಗಾಗಿ ಆಕ್ಷೇಪಣೆಯನ್ನು ಸಲ್ಲಿಸಬಹುದು.
ಗ್ರಾಮ ಸ್ವರಾಜ್ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಹುದ್ದೆಗಳ ಭರ್ತಿಗೆ ಅಧಿಸೂಚನೆ
ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು, ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ, ಬೆಂಗಳೂರು, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಬೆಂಗಳೂರು, ಮತ್ತು ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಸಂಬಂಧ ದಿನಾಂಕ 28-10-2023 ಮತ್ತು 29-10-2023 ಹಾಗು 18-11-2023 ರಿಂದ 25-11-2023 ವರೆಗೆ ನಡೆದ ಸ್ಪರ್ಧಾತ್ಮಕ ಪರೀಕ್ಷೆಯ ತಾತ್ಕಾಲಿಕ ಆಯ್ಕೆಪಟ್ಟಿ (Provisional Selection List) ಪ್ರಾಧಿಕಾರದ ವೆಬ್ಸೈಟಿನಲ್ಲಿ ದಿನಾಂಕ 22-04-2024 ರಂದು ಪ್ರಕಟಿಸಲಾಗಿದೆ.
ತಾತ್ಕಾಲಿಕ ಆಯ್ಕೆಪಟ್ಟಿ ಬಗ್ಗೆ ಆಕ್ಷೇಪಣೆ :
ಪ್ರಕಟಿಸಲಾಗಿರುವ ತಾತ್ಕಾಲಿಕ ಆಯ್ಕೆಪಟ್ಟಿಯ ಕುರಿತು ಆಕ್ಷೇಪಣೆಗಳಿದ್ದಲ್ಲಿ ದಿನಾಂಕ 22-04-2024 ರಿಂದ 29-04-2024 ರೊಳಗೆ ಪ್ರಾಧಿಕಾರದ ಇಮೇಲ್ kea2023exam@gmail.com ಗೆ ಕಳುಹಿಸಬಹುದು.
ಪ್ರಮುಖ ಲಿಂಕ್ಗಳು/ Important Links:
Download the Provisional Selection List
Pingback: ಕರ್ನಾಟಕ ಸರ್ಕಾರದ ಈ ಸಂಸ್ಥೆಯಲ್ಲಿ ಖಾಲಿ ಇರುವ ಕಿರಿಯ ಸಹಾಯಕ & ಸಹಾಯಕ ಗ್ರಂಥಪಾಲಕ ಹುದ್ದೆಗಳಿಗೆ ಅರ್ಜಿ ಆಹ್ವ
Pingback: ಮೀನುಗಾರಿಕೆ & ಪಶುಸಂಗೋಪನೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: DoF Recruitment 2024 - KPSC Jobs