ಬೆಂಗಳೂರಿನ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಹುದ್ದೆಗಳ ಭರ್ತಿಗೆ 10ನೇ ಆದವರಿಂದ ಅರ್ಜಿ ಆಹ್ವಾನ- Bangalur MMS Recruitment Notification 2023
ಬೆಂಗಳೂರಿನ ಅಂಚೆ ಇಲಾಖೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಬೆಂಗಳೂರಿನ ಮೇಲ್ ಮೋಟರ್ ಸರ್ವಿಸ್ ನಲ್ಲಿ ಖಾಲಿ ಇರುವ ವಿವಿಧ 28 ಗ್ರೂಪ್ ‘ಸಿ’ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು ಸೆಪ್ಟೆಂಬರ್ 15 ನೇ ದಿನಾಂಕದ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಬಸವೇಶ್ವರ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ & ಸಿಪಾಯಿಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಅಂಚೆ ಇಲಾಖೆ, Mail Motor Service, Bangaluru ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಅಂಚೆ ಇಲಾಖೆ
ಹುದ್ದೆಗಳ ಹೆಸರು: ಗ್ರೂಪ್ ಸಿ ಹುದ್ದೆಗಳು
ಹುದ್ದೆಗಳ ಸಂಖ್ಯೆ- 28
ಹುದ್ದೆಗಳ ವಿವರ/ Post Details (ಜಿಲ್ಲಾವಾರು ಹುದ್ದೆಗಳ ವಿವರ)
ಚಿಕ್ಕೊಡಿ-01 |
ಕಲಬುರಗಿ-01 |
ಧಾರವಾಡ-01 |
ಗದಗ-01 |
ಕಾರವಾರ-01 |
MMS ಬೆಂಗಳೂರು-15 |
ಮಂಡ್ಯ-01 |
ಮೈಸೂರು- 03 |
ಪುತ್ತುರು-01 |
ಶಿವಮೊಗ್ಗ-01 |
ಉಡುಪಿ-01 |
ಕೋಲಾರ-01 |
ಒಟ್ಟು ಹುದ್ದೆಗಳು- 28 |
ವೇತನ ಶ್ರೇಣಿ/ Salary Scale:
ಅಂಚೆ ಇಲಾಖೆಯ ನಿಯಮಾವಳಿಗಳ ಅನ್ವಯ ವೇತನ ಶ್ರೇಣಿ: ರೂ. 19900-63200 ವೇತನ ನೀಡಲಾಗುತ್ತದೆ.
Education/ ವಿದ್ಯಾರ್ಹತೆ
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಹತ್ತನೇ ತರಗತಿ ಪಾಸ್ ಆಗಿರಬೇಕು & ಚಾಲ್ತಿಯಲ್ಲಿರುವ ಡ್ರೈವಿಂಗ್ ಲೈಸೆನ್ಸ್ ಅನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ವಯೋಮಿತಿ/ Age Limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 30 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ/ Application Fees
ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ / Selection Method
ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ Application Submission
ಅರ್ಹ & ಆಸಕ್ತ ಅಭ್ಯರ್ಥಿಗಳು ಅಂಚೆ ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ದಿನಾಂಕ 15-09-2023 ರ ಒಳಗಾಗಿ The Manager, Mail Motor Service, No. 4, Basaveshwara Road, Vasanth nagar, Bangaluru – 560001 ವಿಳಾಸಕ್ಕೆ ಪೋಸ್ಟ್ ಮುಖಾಂತರ ಅರ್ಜಿ ಕಳುಹಿಸಬೇಕು.
ಪ್ರಮುಖ ದಿನಾಂಕಗಳು/ Important Dates
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 15-09-2023
ಅಧಿಕೃತ ಲಿಂಕ್/ Official Links:
ಅರ್ಜಿ ನಮೂನೆ/ Application format
Pingback: ಉನ್ನತಾ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಎ & ಬಿ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- NTA HE
Pingback: ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಯಮಿತದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ- 248 ಹುದ್ದೆಗಳ ಭರ್ತಿಗೆ ಅರ್ಜಿ ಆ