ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಗುಮಾಸ್ತ & ಚಾಲಕ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ: BOAT SRP Recruitment Notification 2023
ಕೇಂದ್ರ ಶಿಕ್ಷಣ ಇಲಾಖೆಯ ಅಡಿಯಲ್ಲಿ ಬರುವ ಶಿಶುಕ್ಷು ತರಬೇತಿ ಮಂಡಳಿ (Board of Apprenticeship Training) ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಮೇಲು ದರ್ಜೆ ಗುಮಾಸ್ತ, ಚಾಲಕ ಸೇರಿದಂತೆ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 19-10-2023 ಕೊನೆಯ ದಿನಾಂಕವಾಗಿದ್ದು ಆಸಕ್ತರು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
Board of Apprenticeship Training (Southern Region) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಶಿಶುಕ್ಷು ತರಬೇತಿ ಮಂಡಳಿ (BOAT)
ಹುದ್ದೆಯ ಹೆಸರು: UDC, Analyst & Driver
ಹುದ್ದೆಗಳ ಸಂಖ್ಯೆ- 06
ಕೆಲಸದ ಸ್ಥಳ: ಭಾರತದಾಧ್ಯಂತಾ
ಹುದ್ದೆಗಳ ಹಂಚಿಕೆ/ Post Distribution:
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಅನಾಲಿಸ್ಟ್/ Analyst | 01 |
ಅಪ್ಪರ್ ಡಿವಿಸನ್ ಕ್ಲರ್ಕ್/ UDC | 03 |
ಚಾಲಕ/ Driver | 02 |
ಒಟ್ಟು ಹುದ್ದೆಗಳು | 06 |
ವೇತನ/ Salary
ರಾಷ್ಟ್ರೀಯ ವಿದ್ಯುನ್ಮಾನ & ಮಾಹಿತಿ ತಂತ್ರಜ್ಞಾನ ಸಂಸ್ಥೆ ನಿಯಮಾವಳಿಗಳ ಅನ್ವಯ ಕೆಳಗಿನಂತೆ ಮೂಲವೇತನವನ್ನು ನೀಡಲಾಗುತ್ತದೆ. ಇದರ ಜೊತೆಗೆ ಡಿಎ/ HRA ಮುಂತಾದ ಸೌಲಭ್ಯಗಳು ದೊರೆಯುತ್ತವೆ.
ಹುದ್ದೆಗಳ ಹೆಸರು | ವೇತನ ಶ್ರೇಣಿ |
ಅನಾಲಿಸ್ಟ್/ Analyst | ರೂ. 29200- |
ಅಪ್ಪರ್ ಡಿವಿಸನ್ ಕ್ಲರ್ಕ್/ UDC | ರೂ. 25500 |
ಚಾಲಕ/ Driver | ರೂ. 19900 |
ಶೈಕ್ಷಣಿಕ ಅರ್ಹತೆಗಳು/ Educational Qualification:
ಅನಾಲಿಸ್ಟ್/ Analyst: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕನಿಷ್ಟ 50% ಅಂಕಗಳೊಂದಿಗೆ ಬಿಕಾಂ/ ಬಿಎ/ ಬಿಎಸ್ಸಿ ಮುಗಿಸಿರಬೇಕು & ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಟ 8 ವರ್ಷಗಳ ಅನುಭವ ಹೊಂದಿರಬೇಕು.
ಅಪ್ಪರ್ ಡಿವಿಸನ್ ಕ್ಲರ್ಕ್/ UDC: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕನಿಷ್ಟ 50% ಅಂಕಗಳೊಂದಿಗೆ ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು & ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಟ 5 ವರ್ಷಗಳ ಅನುಭವ ಹೊಂದಿರಬೇಕು.
ಚಾಲಕ/ Driver: ಮಾನ್ಯತೆ ಪಡೆದ ಸಂಸ್ಥೆಯಿಂದ ಹತ್ತನೇ/ ಪಿಯುಸಿ ಮುಗಿಸಿರಬೇಕು & ಚಾಲ್ತಿಯಲ್ಲಿರುವ Heavy& Light ಚಾಲನಾ ಪರವಾನಗಿಯನ್ನು ಹೊಂದಿರಬೇಕು.
ಅರ್ಜಿ ಶುಲ್ಕ/ Application Fees:
ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ. 1000
ಪ.ಜಾ/ ಪಪಂ/ ಅಂಗವಿಕಲ/ ಎಲ್ಲ ವರ್ಗದ ಮಹಿಳಾ ಅಭ್ಯರ್ಥಿಗಳಿಗೆ : ರೂ. 500/-
ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.
ವಯೋಮಿತಿ/ Age limit: (As on Closing date)
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 35 ವಯೋಮಿತಿಯನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ & ಕೌಶಲ್ಯ ಪರೀಕ್ಷೆಯನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ದಿನಾಂಕ 09.09.2023 ರಿಂದ 19.10.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು Boat ನ ವೆಬ್ ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
The Candidates who interested to apply online Click the NEXT button to Application submission.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 09-09-2023
Online ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19-10-2023
ಹಾರ್ಡ್ ಕಾಪಿಯನ್ನು ಕಳುಹಿಸಿಕೊಡುವ ಕೊನೆಯ ದಿನಾಂಕ: 25-10-2023
Important Links/ ಪ್ರಮುಖ ಲಿಂಕುಗಳು:
Pingback: KEA ಯಿಂದ ಆಹಾರ ಇಲಾಖೆ ಸೇರಿ 4 ಇಲಾಖೆಗಳಲ್ಲಿ ಖಾಲಿ ಇರುವ 670 ಹುದ್ದೆಗಳ ಭರ್ತಿ: ಪರೀಕ್ಷಾ ವೇಳಾಪಟ್ಟಿ & ಪ್ರವೇಶ ಪತ್ರ-
Pingback: ಕರ್ನಾಟಕ ರಾಜ್ಯ ಕೈಗಾರಿಕಾ & ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತದಿಂದ ಅಧಿಸೂಚನೆ- ವೇತನ ರೂ. 1,00,000/- : KSIIDC Jobs 2023 - KPSC
Pingback: คลินิกปลูกผม