CIMS ಕರ್ನಾಟಕದಲ್ಲಿ ನೇಮಕಾತಿ ಅಧಿಸೂಚನೆ ಪ್ರಕಟ: ಖಾಲಿ ಇರುವ ಸ್ಟಾಫ್ ನರ್ಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ:
ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧನಾ ಆಸ್ಪತ್ರೆಯಾದ ಅರಳುಗುಪ್ಪೆ ಮಲ್ಲೇ ಗೌಡ ಜಿಲ್ಲಾ ಆಸ್ಪತ್ರೆ ನಿರ್ವಹಣೆಗಾಗಿ ಸೃಜನೆಯಾಗಿರುವ ಹುದ್ದೆಗಳ ಪೈಕಿ 35 Staff Nurse ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಸಂಸ್ಥೆಯ ಬೈಲಾ ಹಾಗೂ ವೃಂದ ಮತ್ತು ನೇಮಕಾತಿ ಆಧಾರದ ಮೇಲೆ ನಿಯಮಾನುಸಾರ ನೇಮಕಾತಿ ಮಾಡಿಕೊಳ್ಳಲಾಗುವುದು.. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ…
ಕರ್ನಾಟಕ ಸರ್ಕಾರದ CIMS ನಲ್ಲಿ ಖಾಲಿ ಇರುವ ಸ್ಟಾಫ್ ನರ್ಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಹುದ್ದೆಗಳ ವಿವರ/ Post Details:
ಒಟ್ಟು ಹುದ್ದೆಗಳು: 43 ಹುದ್ದೆಗಳು
ವೇತನ/ Salary
ವೇತನ ಶ್ರೇಣಿ: 20000/- ಸಂಚಿತ ವೇತನವನ್ನು ನೀಡಲಾಗಿದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಬಿಎಸ್ಸಿ ನರ್ಸಿಂಗ್ ನಲ್ಲಿ ಪದವಿ ಮುಗಿಸಿರಬೇಕು. ಎಂಎಸ್ಸಿ ನರ್ಸಿಂಗ್ ಮುಗಿದವರಿಗೆ ಆದ್ಯತೆ ಮೇರೆಗೆ ಪರಿಗಣಿಸಲಾಗುವುದು.
ಅರ್ಜಿ ಶುಲ್ಕ/ Application Fees:
ಸಾಮಾನ್ಯ ಅರ್ಹತಾ/ ಓಬಿಸಿ ಅಭ್ಯರ್ಥಿಗಳಿಗೆ: ರೂ. 500/-
ಪ.ಜಾ/ ಪಪಂ/ ಕೆ1 ಸೇರಿದ ಅಭ್ಯರ್ಥಿಗಳಿಗೆ : ಪ್ರಕ್ರಿಯೇ ಶುಲ್ಕ ರೂ. 250/- ಮಾತ್ರ
ನಿರ್ದೇಶಕರು, ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಹೆಸರಿಗೆ ಡಿಮ್ಯಾಂಡ್ ಡ್ರಾಫ್ಟ್ ನ ಮೂಲಕ ಪಾವತಿಸುವುದು.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 21 ವರ್ಷ ಪೂರೈಸಿರಬೇಕು & 38 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 42 ವರ್ಷ
ಇತರೆ ಹಿಂದೂಳಿದ ವರ್ಗ (OBC) : 40 ವರ್ಷ
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ/ ಸಂದರ್ಶನ ನಡೆಸಲಾಗುತ್ತದೆ
ಪ್ರಮುಖ ಸೂಚನೆಗಳು:-
1) ಮೇಲಿನ ಎಲ್ಲಾ ಹುದ್ದೆಗಳಿಗೆ ಸಂಬಂಧಿಸಿದಂತೆ, ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯ ಹಾಗೂ ಮಾನ್ಯತೆ ಹೊಂದಿದ ಕಾಲೇಜುಗಳಲ್ಲಿ ಕೋರ್ಸ್‌ನ್ನು ಹೊಂದಿರತಕ್ಕದ್ದು.
2) ನೇಮಕಾತಿಯು ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಇರುತ್ತದೆ. ಯಾವುದೇ ಖಾಯಂ ನೇಮಕಾತಿಗಾಗಿ ಪರಿಗಣಿಸಲಾಗುವುದಿಲ್ಲ ಹಾಗೂ ಅಭ್ಯರ್ಥಿಗಳು ಯಾವುದೇ ಹಕ್ಕನ್ನು ಚಲಾಯಿಸುವಂತಿಲ್ಲ.
3) ಗುತ್ತಿಗೆ ಆಧಾರದ ಅವಧಿಯು 06 ತಿಂಗಳು ಮಾತ್ರ ಇದ್ದು, ಹಾಗೂ ಹುದ್ದೆಗಳ ನವೀಕರಣವು ಸರ್ಕಾರದ ಮುಂದಿನ ಆದೇಶಗಳಿಗೆ ಒಳಪಟ್ಟಿರುತ್ತದೆ.
4) ಕರ್ನಾಟಕ ನರ್ಸಿಂಗ್ ಕೌನ್ಸಿಲಿಂಗ್ ನಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಸಿರಬೇಕು.
5) ಪದವಿ ಪೂರೈಸಿದ ನಂತರ ಕನಿಷ್ಠ 3 ವರ್ಷಗಳ ಕರ್ತವ್ಯದ ಅನುಭವವನ್ನು ಹೊಂದಿರತಕ್ಕದ್ದು.
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತಿಯುಳ್ಳ ಅಭ್ಯರ್ಥಿಗಳು ಹುದ್ದೆಗೆ ತಕ್ಕಂತೆ ವಿದ್ಯಾರ್ಹತೆ ಹೊಂದಿದ ಶೈಕ್ಷಣಿಕ ದಾಖಲಾತಿಗಳ ಒಂದು ಪ್ರತಿ ಹಾಗೂ ಮೂಲ ದಾಖಲಾತಿಗಳೊಂದಿಗೆ ಅರ್ಜಿಯನ್ನು ದಿನಾಂಕ:10.04.2023 ಸಂಜೆ:05.00 ಗಂಟೆಯೊಳಗಾಗಿ, ನಿರ್ದೇಶಕರ ಕಛೇರಿ, ಹಳೆಯ ಪಿ. ಡಬ್ಲ್ಯೂ, ಡಿ ಬಿಲ್ಡಿಂಗ್, ಆಜಾದ್ ಪಾರ್ಕ್ ಹತ್ತಿರ, ಚಿಕ್ಕಮಗಳೂರು ಇಲ್ಲಿಗೆ ಮುದ್ರಾಂ/ಅಂಚೆ ನೋಂದಣಿ ಮೂಲಕ (Register Post) ಸಲ್ಲಿಸುವುದು. ಅರ್ಜಿ ನಮೂನೆ & ನೋಟಿಫಿಕೇಶನ್ ಗಳನ್ನು ಕೆಳಗೆ ನೀಡಿರುವ ಲಿಂಕ್ ಮೂಲಕ ಪಾವತಿಸಿ.
ಅರ್ಜಿಯೊಂದಿಗೆ ಜನರಲ್ ಅಭ್ಯರ್ಥಿಗಳಿಗೆ ರೂ.500/- ಹಾಗೂ ಎಸ್.ಸಿ/ಎಸ್.ಟಿ/ಕ್ಯಾಟಗರಿ-1 ಅಭ್ಯರ್ಥಿಗಳಿಗೆ ರೂ.250/- ಶುಲ್ಕವನ್ನು ನಿರ್ದೇಶಕರು, ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಚಿಕ್ಕಮಗಳೂರು ಇವರ ಹೆಸರಿನಲ್ಲಿ ಡಿ.ಡಿ ಮೂಲಕ ಪಡೆದು ಸಲ್ಲಿಸತಕ್ಕದ್ದು. ಅರ್ಜಿಯನ್ನು ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ https://cimschikkamagaluru.karnataka.gov.in ಡೌನ್ ಲೋಡ್ ಮಾಡಿಕೊಂಡು ಶೈಕ್ಷಣಿಕ ದಾಖಲಾತಿಗಳೊಂದಿಗೆ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 23-03-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:10-04-2023
Important Links/ ಪ್ರಮುಖ ಲಿಂಕುಗಳು:
ಅಧಿಸೂಚನೆ/ Notification: Download
ಅರ್ಜಿ ಸಲ್ಲಿಸಿ/ Apply Online: Click here
Pingback: ಕರ್ನಾಟಕ ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ತಾಲೂಕು ಕಲ್ಯಾಣಾಧಿಕಾರಿಗಳು( Welfare Officer) ಹುದ್ದೆಗಳಿಗೆ ಅರ್ಜಿ ಆ