CTET 2023 Exam Notification Released- ಕೇಂದ್ರಿಯ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಶಿಕ್ಷಕ ಆಕಾಂಕ್ಷಿಗಳಿಂದ Online ಅರ್ಜಿ ಆಹ್ವಾನ
ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜಕೇಶನ್ (CBSE) ಯಿಂದ 2023 ನೇ ಸಾಲಿನ ಕೇಂದ್ರಿಯ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ನಡೆಸಲು ಅಧಿಸೂಚನೆ ಪ್ರಕಟಿಸಿದೆ. ಶಿಕ್ಷಕ ಆಕಾಂಕ್ಷಿಗಳಿಗೆ ಅಗತ್ಯವಿರುವ ಈ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಡಿಎಡ್, ಬಿಎಡ್, ಬಿಪಿಎಡ್ ಅಥವಾ ತತ್ಸಮಾನ ವಿದ್ಯಾರ್ಹತೆ ಮುಗಿಸಿದವರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. CTET ಪರೀಕ್ಷೆಯನ್ನು CBT ಮೂಲಕ ಜುಲೈ 2023 ರಿಂದ ಆಗಸ್ಟ್ 2023 ರವರೆಗೆ ನಡೆಸಲಾಗುತ್ತದೆ. ಅದಕ್ಕಿಂತ ಮುಂಚೆ ಆಸಕ್ತ & ಅರ್ಹ ಅಭ್ಯರ್ಥಿಗಳು 26-05-2023 ರ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ & ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.
Central Board of Secondary Education ನಲ್ಲಿ ಅಧಿಸೂಚನೆ ಪ್ರಕಟವಾಗಿದ್ದು 2023 ನೇ ಸಾಲಿನ Central Teacher Eligibility Test (CTET) ಪರೀಕ್ಷೆಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
Papers/ ಪತ್ರಿಕೆ:
Paper / ಪತ್ರಿಕೆ 1: 1 ರಿಂದ 5ನೇ ತರಗತಿವರೆಗೆ ಶಿಕ್ಷಕರಾಗಲು ಅರ್ಹತೆ
Paper/ ಪತ್ರಿಕೆ 2: 6 ರಿಂದ 8ನೇ ತರಗತಿ ಶಿಕ್ಷಕರಾಗಲು ಅರ್ಹತೆ
ಪರೀಕ್ಷೆಯ ವೇಳಾಪಟ್ಟಿ/ Schedule of Examination:
ಪರೀಕ್ಷೆಯು ಜುಲೈ 2023 ರಿಂದ ಆಗಸ್ಟ್ 2023 ರವರೆಗೆ ಕಂಪ್ಯೂಟರ್ ಬೇಸಡ್ ಟೆಸ್ಟ್ ಮೂಲಕ ನಡೆಸಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ನ್ಯಾಷನಲ್ ಕೌನ್ಸಿಲ್ ಆಫ್ ಟೀಚರ್ ಎಜುಕೇಶನ್ ನಿಂದ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
ಉದ್ಯೋಗ ಮಾಹಿತಿ: ಪ್ರವಾಸೋಧ್ಯಮ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಅರ್ಜಿ ಶುಲ್ಕ/ Application Fees:
ಸಾಮಾನ್ಯ ವರ್ಗ & ಇತರೆ ಹಿಂದೂಳಿದ ವರ್ಗ: ಪತ್ರಿಕೆ 1/ 2 ಕ್ಕೆ ರೂ 1000/- ಅರ್ಜಿ ಶುಲ್ಕ & ಎರಡು ಪತ್ರಿಕೆಗಳಿಗೆ ಅರ್ಜಿ ಸಲ್ಲಿಸಲು ರೂ. 1200/-
ಪಜಾ/ ಪಪಂ/ ಅಂಗವಿಕಲ : ಪತ್ರಿಕೆ 1/ 2 ಕ್ಕೆ ರೂ 500/- ಅರ್ಜಿ ಶುಲ್ಕ & ಎರಡು ಪತ್ರಿಕೆಗಳಿಗೆ ಅರ್ಜಿ ಸಲ್ಲಿಸಲು ರೂ. 600/-
ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.
ಆಯ್ಕೆವಿಧಾನ/ Selection procedure:
1) ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕಂಪ್ಯೂಟರ್ ಬೇಸಡ್ ಟೆಸ್ಟ್ ಅನ್ನು ನಡೆಸಲಾಗುತ್ತದೆ.
2) ಪರೀಕ್ಷೆಯು 150 ಅಂಕಗಳನ್ನು ಒಳಗೊಂಡ ಒಂದೇ ಪತ್ರಿಕೆ ಇರುತ್ತದೆ.
3) ಋಣಾತ್ಮಕ ಅಂಕಗಳು ಇರುವುದಿಲ್ಲ.
4) ಪತ್ರಿಕೆಯು ಇಂಗ್ಲೀಷ್/ ಹಿಂದಿ ಭಾಷೆಯಲ್ಲಿ ಇರುತ್ತದೆ.
5) ಈ ಪರೀಕ್ಷೆಯನ್ನು ಉತ್ತೀರ್ಣ ಹೊಂದಲು ಒಟ್ಟು ಅಂಕಗಳಲ್ಲಿ ಶೇ. 60% ಅಂಕಗಳನ್ನು ಗಳಿಸಬೇಕಾಗುತ್ತದೆ.
6) ಈ ಪರೀಕ್ಷೆಯನ್ನು ಉತ್ತೀರ್ಣ ಹೊಂದಿದರೆ, ಪ್ರಮಾಣಪತ್ರ ದೊರೆಯುತ್ತದೆ. ಇದು ಶಾಶ್ವತಾ ಮಾನ್ಯತೆಯನ್ನು ಹೊಂದಿರುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 27.04.2023 ರಿಂದ 26.05.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಇಲಾಖೆಯ ವೆಬ್ ಸೈಟ್ www.ctet.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 27-04-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-05-2023
Important Links/ ಪ್ರಮುಖ ಲಿಂಕುಗಳು: