ಪದವಿ ಕಾಲೇಜುಗಳಲ್ಲಿ 9000 ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ- ಸಂಬಳ 32000|

Click here to Share:

Latest Update: 26-01-2022

Department of Collegiate  Education released Online Counselling Schedule, Merit List and others information regarding vacancies Guest Faculties of Various Government First grade College across the Karnataka.

Online Counselling Schedule

Selection Merit List

Official Website

 

ಪದವಿ ಕಾಲೇಜುಗಳಲ್ಲಿ 9000 ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ- ಸಂಬಳ 32000|

ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಕೆಯಾಗುವ ಬೋಧನಾ ಕಾರ್ಯಭಾರವನ್ನು ನಿರ್ವಹಿಸಲು ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳುವ ಸಂಬಂಧ ಪ್ರಸ್ತುತ ನೀಡಲಾಗುತ್ತಿರುವ ಗರಿಷ್ಠ 8/10 ಗಂಟೆಗಳ ಕಾರ್ಯಭಾರಕ್ಕೆ ಬದಲಾಗಿ ಗರಿಷ್ಠ ಗಂಟೆಗಳ ಕಾರ್ಯಭಾರವನ್ನು ನೀಡಿ, ಗೌರವಧನವನ್ನು ಹೆಚ್ಚಿಸಲಾಗಿದೆ. ಅತಿಥಿ ಉಪನ್ಯಾಸಕರಾಗಿ ಹೆಚ್ಚಿನ ಅವಧಿಗೆ ಸೇವೆ ಸಲ್ಲಿಸಿದವರಿಗೆ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಪ್ರಾಧಾನ್ಯತೆ ನೀಡುವುದರೊಂದಿಗೆ ಆಯ್ಕೆ ಪಟ್ಟಿ ತಯಾರಿಸಲು ಆದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಾಂಶುಪಾಲರು ಈ ಮುಂದಿನಂತೆ ಕ್ರಮ ಕೈಕೊಳ್ಳಲು ಸೂಚಿಸಲಾಗಿದೆ.

1) 2021-22ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳುವ ಸಂಬಂಧ ದಿನಾಂಕ:17.01.2022 ರಿಂದ ಆನ್‌ಲೈನ್ ಮೂಲಕ ಅರ್ಹ ಅತಿಥಿ ಉಪನ್ಯಾಸಕರಿಂದ ಅರ್ಜಿ ಆಹ್ವಾನಿಸಲಾಗಿದ್ದು, ದಿನಾಂಕ:21.01.2022 ರವರೆಗೆ ಇಲಾಖೆಯ ಅಂತರ್ಜಾಲ ತಾಣ https://dce.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

2) ಅತಿಥಿ ಉಪನ್ಯಾಸಕರು ಅರ್ಜಿಯಲ್ಲಿ ನೀಡಿರುವ ವಿದ್ಯಾರ್ಹತೆ ಮತ್ತು ಸೇವಾ ವಿವರಗಳ ಆಧಾರದ ಮೇಲೆ  ಕೆಳಕಂಡ ಮಾನದಂಡಗಳನ್ನಯ ಕಾಲೇಜುಗಳಲ್ಲಿ ವಿಷಯವಾರು ಲಭ್ಯವಿರುವ ಕಾರ್ಯಭಾರಕ್ಕನುಗುಣವಾಗಿ ಅಗತ್ಯವಿರುವ ಅರ್ಹ ಅಭ್ಯರ್ಥಿಗಳ ರಾಜ್ಯವ್ಯಾಪಿ ಆಯ್ಕೆ ಪಟ್ಟಿಯನ್ನು ಸಿದ್ದಪಡಿಸಲಾಗುತ್ತದೆ.

ಅಂಕಗಳು ವಿದ್ಯಾರ್ಹತೆ: ಅಭ್ಯರ್ಥಿಯು ಎರಡು ವರ್ಷ ಸ್ನಾತಕೋತ್ತರ ಪದವಿಯಲ್ಲಿ ಗಳಿಸಿರುವ ఒటు ಶೇಕಡಾವಾರು ಅಂಕಗಳ 25%ನ್ನು ಗಣನೆಗೆ ತೆಗೆದುಕೊಳ್ಳುವುದು.

ಹೆಚ್ಚುವರಿ ವಿದ್ಯಾರ್ಹತೆ:

 1) ಪಿಹೆಚ್.ಡಿ ವಿದ್ಯಾರ್ಹತೆ ಪಡೆದಿದ್ದಲ್ಲಿ 12

2) ಎನ್‌ಇಟಿ/ಕೆ-ಸೆಟ್/ಎಸ್‌ಎಲ್‌ಇಟಿ ವಿದ್ಯಾರ್ಹತೆ ಪಡೆದಿದ್ದಲ್ಲಿ 09

3) ಎಂ.ಫಿಲ್. ವಿದ್ಯಾರ್ಹತೆ ಪಡೆದಿದ್ದಲ್ಲಿ 06

4) ಅನುಭವ: ಹಿಂದಿನ ವರ್ಷಗಳಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಮಾತ್ರ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಅವಧಿಗೆ ಪ್ರತಿ ಶೈಕ್ಷಣಿಕ ವರ್ಷಕ್ಕೆ 3 ಅಂಕಗಳಂತೆ ಗರಿಷ್ಠ 16 ವರ್ಷಗಳಿಗೆ 48 ಅಂಕಗಳನ್ನು ಮಿತಿಗೊಳಿಸುವುದು.

ಸೂಚನೆ: ವಿಕಲಚೇತನ ಅಭ್ಯರ್ಥಿಗಳಿಗೆ 10 ಅಂಕಗಳನ್ನು ಹೆಚ್ಚುವರಿಯಾಗಿ ನೀಡುವುದು.

3) ಅರ್ಜಿ ಸಲ್ಲಿಸುವ ಅತಿಥಿ ಉಪನ್ಯಾಸಕರು ಅವರು ಕಾರ್ಯನಿರ್ವಹಿಸಲು ಇಚ್ಚಿಸುವ 10 ಕಾಲೇಜುಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ.

4) ಆಯ್ಕೆಪಟ್ಟಿಯಲ್ಲಿನ ಅಭ್ಯರ್ಥಿಗಳು ಆಯ್ಕೆ ಮಾಡಿಕೊಂಡಿರುವ 10 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅವರಿಗೆ ಅವಕಾಶ ಲಭ್ಯವಾಗದಿದ್ದಲ್ಲಿ ಯಾವ ಕಾಲೇಜಿನಲ್ಲಿ ಕಾರ್ಯಭಾರ ಲಭ್ಯವಿದೆಯೋ ಅಂತಹ ಕಾಲೇಜಿನಲ್ಲಿ ಕಾರ್ಯನಿರ್ವಹಿಸಲು ಅವಕಾಶ ಕಲ್ಪಿಸಲಾಗುವುದು.

5) ಅಂತಿಮವಾಗಿ, ಆಯ್ಕೆಗೊಂಡ ಅಭ್ಯರ್ಥಿಗಳನ್ನು ಅವರು ಆಯ್ಕೆ ಮಾಡಿಕೊಂಡಿರುವ ಕಾಲೇಜುಗಳಿಗೆ ಪಟ್ಟಿಯನ್ನು ರವಾನಿಸಲಾಗುತ್ತದೆ. ಪ್ರಾಂಶುಪಾಲರು ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಮಯದಲ್ಲಿ ಸಲ್ಲಿಸಿರುವ ವಿವರಗಳಂತೆ ಅವರ ವಿದ್ಯಾರ್ಹತೆ ಮತ್ತು ಸೇವಾ ಪ್ರಮಾಣ ಪತ್ರಗಳನ್ನು ಪರಿಶೀಲಿಸಿ, ದಾಖಲೆಗಳು ಕ್ರಮಬದ್ಧವಾಗಿರುವ ಅಭ್ಯರ್ಥಿಗಳನ್ನು ಅತಿಥಿ ಉಪನ್ಯಾಸಕರ ಕರ್ತವ್ಯಕ್ಕೆ ಹಾಜರುಪಡಿಸಿಕೊಳ್ಳುವುದು.

6) ಒಂದು ವೇಳೆ ಅಭ್ಯರ್ಥಿಗಳು ತಪ್ಪು ಮಾಹಿತಿ ನೀಡಿದ್ದಲ್ಲಿ, ಅಂತಹ ಅಭ್ಯರ್ಥಿಗಳನ್ನು ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆಯಿಂದ ಅನರ್ಹಗೊಳಿಸಿ, ಅವರುಗಳ ವಿರುದ್ದ ಕಾನೂನು ಕ್ರಮ ಜರುಗಿಸಲಾಗುವುದು.

7) ಆಯ್ಕೆಗೊಂಡ ಅಭ್ಯರ್ಥಿಗಳು ಆಯಾ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳದಿದ್ದಲ್ಲಿ ಅವರ ಬದಲಿಗೆ ನಂತರದ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಕಾಲೇಜಿಗೆ ರವಾನಿಸಲಾಗುವುದು.

8) ಆನ್‌ಲೈನ್ ಮೂಲಕ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳುತ್ತಿರುವ ಕುರಿತು ಎಲ್ಲಾ ಸರ್ಕಾರಿ ಕಾಲೇಜುಗಳ ಪ್ರಾಂಶುಪಾಲರು ತಮ್ಮ ಕಾಲೇಜುಗಳ ನೋಟೀಸ್ ಬೋರ್ಡ್‌ನಲ್ಲಿ ಪ್ರಕಟಿಸುವುದರೊಂದಿಗೆ, ಅಭ್ಯರ್ಥಿಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾಹಿತಿಯನ್ನು ನೀಡುವುದು.

9) ಅತಿಥಿ ಉಪನ್ಯಾಸಕರ ಆಯ್ಕೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಳನ್ನು ಇಲಾಖೆಯ ಅಂತರ್ಜಾಲ ತಾಣ https://dce,karnataka.gov.in ರಲ್ಲಿ ಪ್ರಕಟಿಸಲಾಗುವುದು. ಆದ್ದರಿಂದ ಅಭ್ಯರ್ಥಿಗಳು ಸದರಿ ಅಂತರ್ಜಾಲ ತಾಣವನ್ನು ಪ್ರತಿನಿತ್ಯ ಗಮನಿಸಲು ತಿಳಿಸಲಾಗಿದೆ.

Important Links

Apply Online
Notification
Official Website

Click here to Share:
Bookmark the permalink.

About sdkpscjob

www.kpscjobs.com Educator & Blogger

Leave a Reply

Your email address will not be published. Required fields are marked *