ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಹುದ್ದೆಗಳ ಭರ್ತಿಗೆ 10ನೇ ಆದವರಿಂದ ಅರ್ಜಿ ಆಹ್ವಾನ- Indian Post MMS Chennai Jobs 2024
ಅಂಚೆ ಇಲಾಖೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಚೆನೈನ ಮೇಲ್ ಸರ್ವಿಸ್ ನಲ್ಲಿ ಖಾಲಿ ಇರುವ ವಿವಿಧ 10 ಗ್ರೂಪ್ ‘ಸಿ’ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು 30-08-2024 ರ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ESIC ಕರ್ನಾಟಕ ವೃತ್ತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗ ಭರ್ತಿಗೆ ಅರ್ಜಿ ಆಹ್ವಾನ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಅಂಚೆ ಇಲಾಖೆ, Mail Motor Service, Chennai ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
KPSC ಯಿಂದ 384 KAS ಗೆಜೆಟೆಡ್ ಪ್ರೊಬೇಶನರಿ ಹುದ್ದೆಗಳ ಪ್ರವೇಶ ಪತ್ರ ಬಿಡುಗಡೆ: ಅಭ್ಯರ್ಥಿಗಳಿಗೆ ಪ್ರಮುಖ ಸೂಚನೆಗಳು
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಅಂಚೆ ಇಲಾಖೆ
ಹುದ್ದೆಗಳ ಹೆಸರು: ಗ್ರೂಪ್ ಸಿ ಹುದ್ದೆಗಳು
ಹುದ್ದೆಗಳ ಸಂಖ್ಯೆ- 10
ಟ್ರೇಡ್ ಗಳು | ಹುದ್ದೆಗಳ ಸಂಖ್ಯೆ |
M.V ಮೆಕ್ಯಾನಿಕ್ | 04 |
M.V ಎಲೆಕ್ಟ್ರಿಷಿಯನ್ | 01 |
ಟೈರ್ ಮನ್ / Tyreman | 01 |
ಬ್ಲಾಕ್ ಸ್ಮಿತ್ / Blacksmith | 01 |
ಕಾರ್ಪೆಂಟರ್ /Carpenter | 01 |
ವೇತನ ಶ್ರೇಣಿ/ Salary Scale:
ಅಂಚೆ ಇಲಾಖೆಯ ನಿಯಮಾವಳಿಗಳ ಅನ್ವಯ ವೇತನ ಶ್ರೇಣಿ: ರೂ. 19900-63200 ವೇತನ ನೀಡಲಾಗುತ್ತದೆ.
Education/ ವಿದ್ಯಾರ್ಹತೆ
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಹತ್ತನೇ ತರಗತಿ ಪಾಸ್ ಆಗಿರಬೇಕು & ಸಂಬಂಧಿಸಿದ ಟ್ರೇಡ್ ನಲ್ಲಿ ಐಟಿಐ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ವಯೋಮಿತಿ/ Age Limit: (As on 30-08-2024)
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 30 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ/ Application Fees
ರೂ. 100/- ಅನ್ನು ಪಾವತಿಸಬೇಕು
ಆಯ್ಕೆ ವಿಧಾನ / Selection Method
ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ Application Submission
ಅರ್ಹ & ಆಸಕ್ತ ಅಭ್ಯರ್ಥಿಗಳು ಅಂಚೆ ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ದಿನಾಂಕ 30-08-2024 ರ ಒಳಗಾಗಿ Senior Manager, Mail Motor Service, No. 37, Greams Road, Chennai- 600006 ವಿಳಾಸಕ್ಕೆ ಪೋಸ್ಟ್ ಮುಖಾಂತರ ಅರ್ಜಿ ಕಳುಹಿಸಬೇಕು.
ಇಂಡಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ 300 ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು/ Important Dates
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 30-08-2024
ಅಧಿಕೃತ ಲಿಂಕ್/ Official Links:
ಅರ್ಜಿ ನಮೂನೆ/ Application format