ಕರ್ನಾಟಕ ಅರಣ್ಯ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ: ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಭರ್ತಿಗೆ ಅರ್ಜಿ ಆಹ್ವಾನ: Karnataka Forest Dept. Recruitment
ಅರಣ್ಯ ಇಲಾಖೆಯ ಕೊಡಗು, ಮೈಸೂರು, ಚಾಮರಾಜನಗರ, ಶಿವಮೊಗ್ಗ ವೃತ್ತ ವ್ಯಾಪ್ತಿಯಲ್ಲಿ ಆನೆಕಾವಾಡಿಗ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ನಿಗಧಿತ ನಮೂನೆಯಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಮುದ್ದಾಂ ಮೂಲಕ ಅಥವಾ ಅಂಚೆ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಅರ್ಜಿಗಳಿಗೆ ಯಾವುದೇ ತರಹದ ಸ್ವೀಕೃತಿ ಪತ್ರವನ್ನು ನೀಡಲಾಗುವುದಿಲ್ಲ. ಅರ್ಜಿ ನಮೂನೆ ಮಾದರಿ ಹಾಗೂ ಅಧಿಸೂಚನೆಯನ್ನು ಇಲಾಖಾ ವೆಬ್‌ಸೈಟ್‌ನಲ್ಲಿ ಹಾಗೂ ಕಛೇರಿಯ ನೋಟೀಸ್ ಬೋರ್ಡ್‌ನಲ್ಲಿ ಪ್ರಕಟಿಸಲಾಗಿದೆ. ಅಂಚೆ ಮೂಲಕ ಅರ್ಜಿ ಸ್ವೀಕರಿಸಲು ನಿಗಧಿಪಡಿಸಿದ ಕೊನೆಯ ದಿನಾಂಕದ ನಂತರ ಮುದ್ದಾಂ ಅಥವಾ ಅಂಚೆಯ ಮೂಲಕ ಸ್ವೀಕೃತವಾದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಅರ್ಜಿ ಸ್ವೀಕರಿಸಲು ನಿಗಧಿಪಡಿಸಿದ ಕೊನೆಯ ದಿನಾಂಕವು ಸಾರ್ವತ್ರಿಕ ರಜಾ ದಿನವಾಗಿ ಘೋಷಿಸಲ್ಪಟ್ಟರೆ, ಆ ದಿನಾಂಕದ ಮರು ಕೆಲಸದ ದಿನವು ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕವಾಗುತ್ತದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ
ಅರ್ಹತೆಗಳು:
ಕರ್ನಾಟಕ ರಾಜ್ಯದ ವ್ಯಾಪ್ತಿಯ ಅಧಿಸೂಚಿತ ಅರಣ್ಯದೊಳಗೆ ವಾಸಿಸುವರಾಗಿರತಕ್ಕದ್ದು.
ವಿದ್ಯಾರ್ಹತೆ : ಕನ್ನಡ ಭಾಷೆ ಮಾತನಾಡಲು ಮತ್ತು ಅರ್ಥೈಸಿಕೊಳ್ಳಲು ಶಕ್ತನಾಗಿರಬೇಕು.
ಅನುಭವ : ಆನೆ ನಿರ್ವಹಣೆಯಲ್ಲಿ ಅನುಭವ ಹೊಂದಿರುವುದು ಕಡ್ಡಾಯವಾಗಿರುತ್ತದೆ.
ವಯೋಮಿತಿ :
ಅರ್ಜಿ ಸಲ್ಲಿಸಲು ಅಭ್ಯರ್ಥಿಯು ನೇಮಕಾತಿಗಾಗಿ ಅರ್ಜಿ ಸಲ್ಲಿಸುವ ದಿನಾಂಕಕ್ಕೆ ಅಭ್ಯರ್ಥಿಗೆ ಕನಿಷ್ಟ 18 ವರ್ಷ ವಯಸ್ಸಾಗಿರಬೇಕು ಮತ್ತು ಈ ಕೆಳಕಂಡಂತೆ ಗರಿಷ್ಠ ವಯೋಮಿತಿ ಮೀರಿರಬಾರದು.
ಗರಿಷ್ಠ ವಯೋಮಿತಿ :
ಸಾಮಾನ್ಯ ಅಭ್ಯರ್ಥಿಗಳಿಗೆ: 35 ವರ್ಷ
ಇತರೆ ಹಿಂದೂಳಿದ ವರ್ಗದವರಿಗೆ: 38 ವರ್ಷ
ಪ.ಜಾತಿ, ಪ.ಪಂ & ಪ್ರವರ್ಗ 1: 40 ವರ್ಷ
ಅರ್ಜಿ ನಮೂನೆ :
ಈ ಅಧಿಸೂಚನೆಯೊಂದಿಗೆ ಪ್ರಕಟಿಸಿರುವ ಅರ್ಜಿ ನಮೂನೆಯಲ್ಲಿ ಮಾತ್ರ ಅಭ್ಯರ್ಥಿಗಳು ಅರ್ಜಿಯನ್ನು ಬೆರಳಚ್ಚು / ಕಂಪ್ಯೂಟರ್ ಪ್ರಿಂಟ್ ಮಾಡಿಸಿ, ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸತಕ್ಕದ್ದು.
ಅರ್ಜಿಗಳನ್ನು ಸಲ್ಲಿಸಬೇಕಾದ ವಿಳಾಸ : “ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ” ಕೊಡಗು ವೃತ್ತ, ಅರಣ್ಯಭವನ ಮೈಸೂರು ರಸ್ತೆ, ಮಡಿಕೇರಿ-571201 ಕೊಡಗು ಜಿಲ್ಲೆ.
ಸ್ವೀಕೃತ ಅರ್ಜಿಗಳ ಪರಿಶೀಲನೆ
ಅಧಿಸೂಚನೆಯಲ್ಲಿ ನಿಗದಿಪಡಿಸಿರುವ ಅರ್ಹತೆ ಮತ್ತು ದಾಖಲೆಗಳ ಆಧಾರದ ಮೇಲೆ ಸ್ವೀಕೃತವಾದ ಅರ್ಜಿಗಳನ್ನು ಪರಿಶೀಲಿಸಿ ಪುರಸ್ಕರಿಸಿದ ಅರ್ಜಿಗಳು ಹಾಗೂ ತಿರಸ್ಕರಿಸಿದ ಅರ್ಜಿಗಳಾಗಿ ವಿಂಗಡಿಸಿ ಅರ್ಹ ಅರ್ಜಿಗಳ ಅಭ್ಯರ್ಥಿಗಳಿಗೆ ನಿಗದಿಪಡಿಸಲಾದ ಸಂದರ್ಶನದ ದಿನಾಂಕಕ್ಕೆ ಮೂಲ ದಾಖಲಾತಿಗಳು ಹಾಗೂ ಅವುಗಳ ದೃಢೀಕೃತ ಪ್ರತಿಗಳೊಂದಿಗೆ ಆಯ್ಕೆ ಸಮಿತಿಯ ಮುಂದೆ ಹಾಜರಾಗಲು ಸಂದರ್ಶನ ಚೀಟಿಯನ್ನು ಕಳುಹಿಸಲಾಗುವುದು ಹಾಗೂ ಅಭ್ಯರ್ಥಿಗಳು ಸಂದರ್ಶನಕ್ಕೆ ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗಬೇಕು.
ಸಂದರ್ಶನ ಪ್ರಕ್ರಿಯೆ ಮತ್ತು ನೇಮಕಾತಿ ವಿಧಾನ
ಸಂದರ್ಶನಕ್ಕೆ ನಿಗದಿಪಡಿಸಿದ ದಿನಾಂಕದಂದು ನಿಗದಿತ ಸಮಯ ಹಾಗೂ ಸ್ಥಳಕ್ಕೆ ಅಭ್ಯರ್ಥಿಗಳು ಅಗತ್ಯ ಎಲ್ಲಾ ಮೂಲ ಹಾಗೂ ದೃಢೀಕೃತ ದಾಖಲಾತಿಗಳೊಂದಿಗೆ ಆಯ್ಕೆ ಸಮಿತಿಯ ಮುಂದೆ ಹಾಜರಾಗಬೇಕು.
ದಾಖಲಾತಿಗಳ ಪರಿಶೀಲನೆಗಾಗಿ ಈ ಕೆಳಕಂಡ ಮೂಲ ದಾಖಲಾತಿ ಹಾಗೂ ದೃಢೀಕೃತ ದಾಖಲಾತಿಗಳನ್ನು ಆಯ್ಕೆ ಸಮಿತಿಯ ಮುಂದೆ ಹಾಜರುಪಡಿಸತಕ್ಕದ್ದು.
ಆನೆ ನಿರ್ವಹಣೆಯಲ್ಲಿ ಅನುಭವ ಹೊಂದಿರುವ ಬಗ್ಗೆ ವಲಯ ಅರಣ್ಯಾಧಿಕಾರಿ ಅಥವಾ ಅವರಿಗಿಂತ ಮೇಲ್ಪಟ್ಟ ಅಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ
ಕರ್ನಾಟಕ ರಾಜ್ಯ ವ್ಯಾಪ್ತಿಯ ಅಧಿಸೂಚಿತ ಅರಣ್ಯದೊಳಗೆ ಪ್ರಸ್ತುತ ವಾಸ ಮಾಡುತ್ತಿದ್ದಾರೆ ಎಂಬ ಬಗ್ಗೆ ಸಂಬಂಧಿಸಿದ ತಹಶೀಲ್ದಾರ್‌ರಿಂದ ಪಡೆದ ಪ್ರಮಾಣ ಪತ್ರ
ಜನ್ಮ ದಿನಾಂಕದ ದೃಢೀಕರಣ ಪತ್ರ (ಜನನ ಪ್ರಮಾಣ ಪತ್ರ / ಶಾಲಾ ದಾಖಲಾತಿ ಪತ್ರ / ಆಧಾರ ಕಾರ್ಡ್ )
ನಿಗದಿತ ನಮೂನೆಯಲ್ಲಿ ಜಾತಿ ಪ್ರಮಾಣ ಪತ್ರ
ಈ ದಾಖಲಾತಿಗಳನ್ನು ಸಲ್ಲಿಸಲು ಯಾವುದೇ ಕಾಲ ವಿಸ್ತರಣೆ ನೀಡಲಾಗುವುದಿಲ್ಲ.
ವಿವಿಧ ಪ್ರವರ್ಗಗಳ ಅಡಿಯಲ್ಲಿ ಮೀಸಲಾತಿ ಕೋರಿದ ಅಭ್ಯರ್ಥಿಗಳು, ಮೂಲ ದಾಖಲೆಗಳ ಪರಿಶೀಲನೆಯ ಸಮಯದಲ್ಲಿ ಹಾಜರುಪಡಿಸಬೇಕಾದ ಪ್ರಮಾಣ ಪತ್ರಗಳನ್ನು ಹಾಜರುಪಡಿಸದೇ ಇದ್ದ ಪಕ್ಷದಲ್ಲಿ ಅವರು ಕೋರಿರುವ ಮೀಸಲಾತಿಯನ್ನು ರದ್ದುಪಡಿಸಿ, ಸಾಮಾನ್ಯ ಅರ್ಹತೆಯ ಅಭ್ಯರ್ಥಿಯೆಂದು ಅವರನ್ನು ಪರಿಗಣಿಸಲಾಗುವುದು.
ಅಭ್ಯರ್ಥಿಗಳ ಮೂಲ ದಾಖಲಾತಿಗಳ ಪರಿಶೀಲನೆ ನಂತರ ಸಂದರ್ಶನ ಪ್ರಕ್ರಿಯೆಗೆ ಆಯ್ಕೆ ಸಮಿತಿ ಮುಂದೆ ಹಾಜರಾಗಬೇಕಾಗುತ್ತದೆ.
ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳನ್ನು ಕನ್ನಡ ಭಾಷೆಯನ್ನು ಮಾತನಾಡುವ ಮತ್ತು ಅರ್ಥೈಸಿಕೊಳ್ಳುವ ಸಾಮಾರ್ಥ್ಯದ ಬಗ್ಗೆ ಹಾಗೂ ಆನೆ ನಿಭಾಯಿಸುವ ಸಾಮಾರ್ಥ್ಯದ ಬಗ್ಗೆ ಗರಿಷ್ಟ ನೂರು(100) ಅಂಕಗಳಿಗಾಗಿ ಪರೀಕ್ಷೆಗೆ, ಒಳಪಡಿಸಲಾಗುವುದು.
ನಂತರ, ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಹಾಗೂ ಮೀಸಲಾತಿ ನಿಯಮಗಳ ಅನುಸಾರ ಅರ್ಹ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಿ, ಆಯ್ಕೆ ಪಟ್ಟಿಯನ್ನು ರಾಜ್ಯ ಪತ್ರದಲ್ಲಿ ಪ್ರಕಟಿಸಿ, ಸದ್ರಿ ಆಯ್ಕೆಪಟ್ಟಿಯನ್ನು ನೇಮಕಾತಿ ಪ್ರಾಧಿಕಾರಿಗೆ ಕಳುಹಿಸಲಾಗುವುದು.
ನೇಮಕಾತಿ ಪ್ರಾಧಿಕಾರದಿಂದ ಆಯ್ಕೆಪಟ್ಟಿಯಲ್ಲಿರುವ ಅಭ್ಯರ್ಥಿಗಳು ನೇಮಕಾತಿ ಹೊಂದಲು ಎಲ್ಲಾ ರೀತಿಯಲ್ಲಿಯೂ ನೇಮಕಾತಿಗೆ ಅರ್ಹತೆ ಹೊಂದಿರುವ ಬಗ್ಗೆ ಖಾತ್ರಿಪಡಿಸಿಕೊಂಡು ನೇಮಕಾತಿ ಆದೇಶ ನೀಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ:
ಭರ್ತಿ ಮಾಡಿದ ಅರ್ಜಿಯನ್ನು “ಆನೆ ಕಾವಾಡಿಗ ಹುದ್ದೆಗೆ ಅರ್ಜಿ” ಎಂದು ಕವರಿನ ಮೇಲೆ ಬರೆದು ಜಿಲ್ಲೆಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ದಿನಾಂಕ : 30-03-2023 ರಿಂದ 29.04.2023ರ ಸಂಜೆ 5.30ಗಂಟೆಯವರೆಗಿನ ಅವಧಿಯೊಳಗೆ ತಲುಪಿಸಬೇಕಾಗಿರುತ್ತದೆ.
ಪ್ರಮುಖ ಲಿಂಕ್/ Important Links
Pingback: KPSC ಯಿಂದ ಸಹಕಾರ ಇಲಾಖೆಯಲ್ಲಿ ಖಾಲಿ ಇರುವ ನಿರೀಕ್ಷಕರು ಹುದ್ದೆಗಳಿಗೆ ಅರ್ಜಿ ಆಹ್ವಾನ: Kpsc Cooperative Inspector Recruitment 2023 - KPSC Jobs
Ba
Pingback: CBI Recruitment 2023- Total 5000 Vacancies: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ - KPSC Jobs