ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಗೆ (KARTET) ಅರ್ಜಿ ಆಹ್ವಾನ: Apply Online- KARTET Exam 2023
ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ 2023 ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗಾಗಿ ಅಧಿಸೂಚನೆ ಪ್ರಕಟವಾಗಿದೆ. ರಾಜ್ಯದ ಶಿಕ್ಷಕ ಆಕಾಂಕ್ಷಿಗಳು ಪ್ರಾಥಮಿಕ & ಟಿಜಿಟಿ ಶಿಕ್ಷಕರಾಗಲು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET) ಅರ್ಹತೆ ಹೊಂದಿರುವುದು ಕಡ್ಡಾಯವಾಗಿರುತ್ತದೆ & ಇದರಲ್ಲಿ ಪಡೆದ ಅಂಕಗಳು ಮೆರಿಟ್ ಪಟ್ಟಿಯಲ್ಲಿ ಪರಿಗಣನೆ ಆಗುತ್ತದೆ. ಆದ್ದರಿಂದ ಈ ಹಿಂದೆ ಎಷ್ಟೆ ಬಾರಿ ನೀವು ಅರ್ಹತೆಯನ್ನು ಪಡೆದಿದ್ದರೂ, ತಮ್ಮ ಅಂಕಗಳನ್ನು ಹೆಚ್ಚಿಸಿಕೊಳ್ಳಲು ಮತ್ತೆ KARTET ಪರೀಕ್ಷೆ ತೆಗೆದುಕೊಳ್ಳಬಹುದು. ಪ್ರಸ್ತುತ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದ್ದು, ದಿನಾಂಕ 05-08-2023 ರ ಒಳಗಾಗಿ ಅರ್ಜಿ ಸಲ್ಲಿಸಬೇಕು. ಇನ್ನು ಅರ್ಜಿ ಸಲ್ಲಿಸದವರು ಕೂಡಲೇ ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ…
2023ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ರಾಷ್ಟ್ರಿಕೃತ ಬ್ಯಾಂಕ್ ಗಳಲ್ಲಿ ಖಾಲಿ ಇರುವ 1400 ಫಿಲ್ಡ್ ಆಫೀಸರ್ & ಕೃಷಿ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಪತ್ರಿಕೆಗಳು/ Papers:
ಪತ್ರಿಕೆ 1/ Paper 1: ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 1-5 ನೇ ತರಗತಿ ಶಿಕ್ಷಕರಾಗಲು ಈ ಪರೀಕ್ಷೆಯನ್ನು ಅರ್ಹತೆ ಹೊಂದಿರಬೇಕು.
ಪತ್ರಿಕೆ 2/ Paper 2:
ರಾಜ್ಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ 5-8 ನೇ ತರಗತಿ ಶಿಕ್ಷಕರಾಗಲು ಈ ಪರೀಕ್ಷೆಯನ್ನು ಅರ್ಹತೆ ಹೊಂದಿರಬೇಕು.
ಶೈಕ್ಷಣಿಕ ಅರ್ಹತೆಗಳು/ Educational Qualification:
ಪತ್ರಿಕೆ 1/ Paper 1:
ಕನಿಷ್ಟ 50% ಅಂಕಗಳೊಂದಿಗೆ ಪಿಯುಸಿ/ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು & ಕನಿಷ್ಟ 50% ಅಂಕಗಳೊಂದಿಗೆ ಡಿಇಡಿ/ ಬಿಇಡಿ/ ಬಿಪಿಇಡಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಪತ್ರಿಕೆ 2/ Paper 2:
ಕನಿಷ್ಟ 50% ಅಂಕಗಳೊಂದಿಗೆ ಪಿಯುಸಿ/ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು & ಕನಿಷ್ಟ 50% ಅಂಕಗಳೊಂದಿಗೆ ಡಿಇಡಿ/ ಬಿಇಡಿ/ ಬಿಪಿಇಡಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಕನಿಷ್ಟ 50% ಅಂಕಗಳೊಂದಿಗೆ ಪಿಯುಸಿ/ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು & ಕನಿಷ್ಟ 50% ಅಂಕಗಳೊಂದಿಗೆ ಡಿಇಡಿ/ ಬಿಇಡಿ/ ಬಿಪಿಇಡಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಅರ್ಜಿ ಶುಲ್ಕ/ Application Fees:
ಸಾಮಾನ್ಯ ವರ್ಗ/ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ:
ಯಾವುದಾದರೂ ಒಂದು ಪತ್ರಿಕೆ (ಪತ್ರಿಕೆ 1 ಅಥವಾ ಪತ್ರಿಕೆ 2): ರೂ. 700/-
ಎರಡು ಪತ್ರಿಕೆಗಳು (ಪತ್ರಿಕೆ 1 & ಪತ್ರಿಕೆ 2): ರೂ. 1000/-
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ 1 ಅಭ್ಯರ್ಥಿಗಳಿಗೆ:
ಯಾವುದಾದರೂ ಒಂದು ಪತ್ರಿಕೆ (ಪತ್ರಿಕೆ 1 ಅಥವಾ ಪತ್ರಿಕೆ 2): ರೂ. 350/-
ಎರಡು ಪತ್ರಿಕೆಗಳು (ಪತ್ರಿಕೆ 1 & ಪತ್ರಿಕೆ 2): ರೂ. 500/-
ವಿಶೇಷ ಅಗತ್ಯತೆಯುಳ್ಳ ಅಭ್ಯರ್ಥಿಗಳಿಗೆ ಪರೀಕ್ಷಾ ಶುಲ್ಕದಿಂದ ವಿನಾಯಿತಿ ಇರುತ್ತದೆ.
ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿಂಗ್/ ಕ್ರೆಡಿಟ್ ಕಾರ್ಡ್/ ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮೂಲಕ ಅಥವಾ ಚಲನ್ ಮೂಲಕ ಪಾವತಿಸಬಹುದು.
ವಯೋಮಿತಿ/ Age limit:
ಗರಿಷ್ಟ ವಯೋಮಿತಿ ಇರುವುದಿಲ್ಲ.
ಅಂಚೆ ಇಲಾಖೆಯಲ್ಲಿ ಬರೊಬ್ಬರಿ 30041 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಹತ್ತನೇ ತರಗತಿ ಮುಗಿದವರು ಅರ್ಜಿ ಹಾಕಿ
ಆಯ್ಕೆವಿಧಾನ/ Selection procedure:
- ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ
- ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರಗಳು: ಎಲ್ಲ ಜಿಲ್ಲಾ ಕೇಂದ್ರಗಳು
- ಪ್ರತಿ ಪತ್ರಿಕೆಯು 150 ಅಂಕಗಳನ್ನೊಳಗೊಂಡ ಬಹು ಆಯ್ಕೆ ಮಾದರಿಯ ಪರೀಕ್ಷೆಯಾಗಿರುತ್ತದೆ.
- ಪರೀಕ್ಷೆಯಲ್ಲಿ ಋಣಾತ್ಮಕ ಮೌಲ್ಯಮಾಪನ ಇರುವುದಿಲ್ಲ.
- ಪರೀಕ್ಷೆಯ ಅವಧಿಯು 2 ಗಂಟೆ 30 ನಿಮಿಷ ಮಾತ್ರ
ಅರ್ಹತೆ/ Eligibility:
ಈ ಪರೀಕ್ಷೆಯಲ್ಲಿ ಅರ್ಹತೆ ಹೊಂದಲು ಸಾಮಾನ್ಯ & 2ಎ, 2ಬಿ, 3ಎ, 3ಬಿ ವರ್ಗದ ಅಭ್ಯರ್ಥಿಗಳು ಶೇ. 60% ಅಂಕಗಳನ್ನು ಪಡೆಯಬೇಕು ಹಾಗೂ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ & ಪ್ರವರ್ಗ 1 ಕ್ಕೆ ಸೇರಿದ ಅಭ್ಯರ್ಥಿಗಳು ಕನಿಷ್ಟ ಶೇ. 55% ಅಂಕಗಳನ್ನು ಗಳಿಸಬೇಕು.
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 14.07.2023 ರಿಂದ 05.08.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಶಿಕ್ಷಣ ಇಲಾಖೆಯ ವೆಬ್ ಸೈಟ್ www.schooleducation.kar.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ..
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 14-07-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-08-2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 05-08-2023
ಪರೀಕ್ಷಾ ದಿನಾಂಕ: 03-09-2023
Important Links/ ಪ್ರಮುಖ ಲಿಂಕುಗಳು:
Pingback: ಕರ್ನಾಟಕ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 1714 ಹುದ್ದೆಗಳ ಬೃಹತ್ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟ: Karnataka Postal Circle Recruitment 2023 -
Pingback: ಅಣುವಿದ್ಯುತ್ ಇಲಾಖೆಯಿಂದ ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟ- NPCIL Kaiga Notification 2023 -
Send notification,