KEA – ಕರ್ನಾಟಕ ಸರ್ಕಾರದ 5 ಇಲಾಖೆಗಳಲ್ಲಿ ಖಾಲಿ ಇರುವ 750 ಹುದ್ದೆಗಳಿಗೆ ಅರ್ಜಿ ಆಹ್ವಾನ: Important Notice Released about Application Submission – KEA 5 Department Notification 2023

Click here to Share:

KEA – ಕರ್ನಾಟಕ ಸರ್ಕಾರದ 5 ಇಲಾಖೆಗಳಲ್ಲಿ ಖಾಲಿ ಇರುವ 750 ಹುದ್ದೆಗಳಿಗೆ ಅರ್ಜಿ ಆಹ್ವಾನ: Important Notice Released about Application Submission – KEA 5 Department Notification 2023

 

ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ

(ಎ) ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ,

(ಬಿ) ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ,

(ಸಿ) ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಮತ್ತು

(ಡಿ) ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ,

(ಇ) ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ ಬೆಂಗಳೂರು,

 

ಈ ಮೇಲಿನ ಸಂಸ್ಥೆಗಳಲ್ಲಿ ಖಾಲಿ ಇರುವ ಮಿಕ್ಕುಳಿದ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳಿಯ) ವೃಂದದ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ದಿನಾಂಕ 24-03-2023 ರಂದು ಅಧಿಸೂಚನೆ ಹೊರಡಿಸಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು 17-04-2023 ರಂದು ಪ್ರಾರಂಭಿಸಲಾಗುವುದೆಂದು ತಿಳಿಸಲಾಗಿತ್ತು. ಆದರೆ ತಾಂತ್ರಿಕ ಸಿದ್ಧತೆಯಿಂದಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕವನ್ನು ಮುಂದೂಡಲಾಗಿದೆ, ಸದ್ಯದಲ್ಲಿ ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಅರ್ಜಿ ಸಲ್ಲಿಸುವ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು.

KSFC Recruitment 2023- ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿ ಖಾಲಿ ಇರುವ ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ : KSFC Deputy Manager Recruitment 2023

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಹೊಸ ಅಧಿಸೂಚನೆಯನ್ನು ಪ್ರಕಟಿಸಿದೆ. ಕರ್ನಾಟಕ ಸರ್ಕಾರದ ವಿವಿಧ ಒಟ್ಟು 5 ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಕ್ಷಿಪ್ತ ಅಧಿಸೂಚನೆಯನ್ನು ಪ್ರಕಟಿಸಿದೆ. ಕರ್ನಾಟಕದ ಕೆಳಕಂಡ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಿರಿ. Click to Below link for Notification & Apply Online

ಸರ್ಕಾರದ ನಿರ್ದೇಶನದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಈ ಕೆಳಗಿನ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸುತ್ತಿದೆ.

Karnataka Examination Authority (KEA) released short notification posts in 5 various departments, Government of Karnataka. The more details regarding this recruitment can find here.

ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಡಾಟಾ ಎಂಟ್ರಿ ಆಪರೇಟರ್ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ICAR NIVEDI Recruitment Notification 2023

ಹುದ್ದೆಗಳು ಖಾಲಿ ಇರುವ ಇಲಾಖೆಗಳು/ Departments

(ಎ) ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ – 186

(ಬಿ) ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ – 386

(ಸಿ) ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ – 26

(ಡಿ) ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ – 88

(ಇ) ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ ಬೆಂಗಳೂರು – 71

 ಮೇಲೆ ಸೂಚಿಸಿರುವ ಪ್ರತಿಯೊಂದು ಸಂಸ್ಥೆಯಲ್ಲಿನ ನೇಮಕಾತಿಯ ಹುದ್ದೆಗಳ ಹೆಸರು, ಒಟ್ಟು ಹುದ್ದೆಗಳ ಸಂಖ್ಯೆ, ಹುದ್ದೆವಾರು ಮತ್ತು ವರ್ಗವಾರು ಖಾಲಿ ಹುದ್ದೆಗಳು ಹಾಗು ವಿವಿಧ ಹುದ್ದೆಗಳಿಗೆ ನಿಗದಿಪಡಿಸಿರುವ ವಯಸ್ಸು, ಅರ್ಹತಾ ಷರತ್ತುಗಳು, ಶೈಕ್ಷಣಿಕ ಅರ್ಹತೆಗಳು, ಸರ್ಧಾತ್ಮಕ ಪರೀಕ್ಷೆಯ ಪೇಪರ್‌ಗಳು, ಆಯ್ಕೆಯ ವಿಧಾನ ಮತ್ತು ನೇಮಕಾತಿ ಹಾಗು ಇತರ ವಿವರಗಳನ್ನು ಸದ್ಯದಲ್ಲಿಯೇ ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗುವುದು.

 

ಅರ್ಜಿ ಸಲ್ಲಿಸುವ ವಿಧಾನ/ How to Apply

ಅರ್ಹ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ನಲ್ಲಿ ಸೂಕ್ತವಾದ URL ಅನ್ನು ಆಯ್ಕೆ ಮಾಡುವ ಮೂಲಕ ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ನಲ್ಲಿ ನೊಂದಣಿ ಮಾಡಿಕೊಳ್ಳಲು, ಅರ್ಜಿ ಸಲ್ಲಿಸಲು ಹಾಗು ಶುಲ್ಕ ಪಾವತಿಸಲು ವೇಳಾಪಟ್ಟಿಯನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು.

KPSC ಯಿಂದ ಅಭ್ಯರ್ಥಿಗಳಿಗೆ ಶುಭ ಸುದ್ದಿ- ಕರ್ನಾಟಕ ಸರ್ಕಾರದ  4 ಇಲಾಖೆಗಳ ವಿವಿಧ ಹುದ್ದೆಗಳ ನೇಮಕಾತಿ ಕುರಿತಂತೆ ಪ್ರಮುಖ ಮಾಹಿತಿ: KPSC Group C Time Table Released

ಪರೀಕ್ಷೆಯ ವೇಳಾಪಟ್ಟಿ/ Schedule of Exam:

ಈ ಅಧಿಸೂಚನೆಯಲ್ಲಿ ಸೂಚಿಸಲಾಗಿರುವ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು 2023 ರ ಜೂನ್-ಜುಲೈ ಅವಧಿಯಲ್ಲಿ ನಡೆಸುವ ಸಾಧ್ಯತೆ ಇದ್ದು, ಸ್ಪರ್ಧಾತ್ಮಕ ಪರೀಕ್ಷೆಯನ್ನು ಬೆಂಗಳೂರಿನಲ್ಲಿ ಮಾತ್ರ ನಡೆಸಲಾಗುವುದು. ಅಭ್ಯರ್ಥಿಗಳು ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕು.

ಪ್ರಮುಖ ಸೂಚನೆಗಳು/ Important Instructions:

1) ಕೇವಲ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವುದು, ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗುವುದು ಅಭ್ಯರ್ಥಿಗಳಿಗೆ ಈ ಮೇಲಿನ ಹುದ್ದೆಗಳಿಗೆ ನೇಮಕಾತಿಯ ಯಾವುದೇ ಹಕ್ಕನ್ನು ನೀಡುವುದಿಲ್ಲ, ನೇಮಕಾತಿಯು ಸರ್ಕಾರವು ನಿಗದಿಪಡಿಸಬಹುದಾದ ಅರ್ಹತಾ ಮಾನದಂಡಗಳಿಗೆ ಒಳಪಟ್ಟಿರುತ್ತದೆ.

2) ಮೇಲಿನ ಯಾವುದೇ ನಿಯಮಗಳು & ಕಾರ್ಯವಿಧಾನಗಳಿಗೆ ಸಂಬಂಧಿಸಿದಂತೆ ವ್ಯತ್ಯಾಸ ಅಥವಾ ಅಸ್ಪಷ್ಟತೆ ಕಂಡು ಬಂದಲ್ಲಿ, ಕರ್ನಾಟಕ ನಾಗರೀಕ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಗಳು, 1977 (ತಿದ್ದುಪಡಿಗಳು) ಹಾಗು ಕರ್ನಾಟಕ ಸರ್ಕಾರದ ನೇಮಕಾತಿ ಅಧಿಸೂಚನೆಗಳು / ಆದೇಶಗಳರಲ್ಲಿರುವಂತೆ ಅನ್ವಯಿಸುತ್ತದೆ.

Important Links/ ಪ್ರಮುಖ ಲಿಂಕುಗಳು:

KEA RGUHS Recruitment 2023

KEA KIONICS Recruitment 2023

KEA MSIL Recruitment 2023

KEA Food Department Recruitment

KEA Labour Department Recruitment

KEA NOTICE

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAP


Click here to Share:
Bookmark the permalink.

About sdkpscjob

www.kpscjobs.com Educator & Blogger

One Response to KEA – ಕರ್ನಾಟಕ ಸರ್ಕಾರದ 5 ಇಲಾಖೆಗಳಲ್ಲಿ ಖಾಲಿ ಇರುವ 750 ಹುದ್ದೆಗಳಿಗೆ ಅರ್ಜಿ ಆಹ್ವಾನ: Important Notice Released about Application Submission – KEA 5 Department Notification 2023

  1. Pingback: สั่งเค้ก

Leave a Reply

Your email address will not be published. Required fields are marked *