KEA ಯಿಂದ 6 ಇಲಾಖೆಗಳಲ್ಲಿ ಖಾಲಿ ಇರುವ 5151 ಹುದ್ದೆಗಳಿಗೆ ಅರ್ಜಿ ಆಹ್ವಾನ: KEA 6 Department Jobs 2024
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಹೊಸ ಅಧಿಸೂಚನೆಯನ್ನು ಪ್ರಕಟಿಸಿದೆ. ಕರ್ನಾಟಕ ಸರ್ಕಾರದ ವಿವಿಧ ಒಟ್ಟು 6 ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 5151 ಹುದ್ದೆಗಳ ನೇಮಕಾತಿಗೆ ಸಂಕ್ಷಿಪ್ತ ಅಧಿಸೂಚನೆಯನ್ನು ಪ್ರಕಟಿಸಿದೆ. ಕರ್ನಾಟಕದ ಕೆಳಕಂಡ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಿರಿ. Click to Below link for Notification & Apply Online
ತೈಲ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 102 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕರ್ನಾಟಕ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ: ವೇತನ ರೂ. 1 ಲಕ್ಷ
ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ
ಇಲಾಖೆ/ ಸಂಸ್ಥೆ | ಒಟ್ಟು ಹುದ್ದೆಗಳು |
ಕರ್ನಾಟಕ ನಗರ ನೀರು ಸರಬರಾಜು & ಒಳಚರಂಡಿ ಮಂಡಳಿ | 64 ಹುದ್ದೆಗಳು |
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ | 2503 ಹುದ್ದೆಗಳು |
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ | 44 ಹುದ್ದೆಗಳು |
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ | 750 ಹುದ್ದೆಗಳು |
ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ ಲಿಮಿಟೆಡ್ | 38 ಹುದ್ದೆಗಳು |
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ | 1752 ಹುದ್ದೆಗಳು |
ಒಟ್ಟು ಹುದ್ದೆಗಳು | 5151 ಹುದ್ದೆಗಳು |
ಈ ಮೇಲಿನ ಸಂಸ್ಥೆಗಳಲ್ಲಿ ಖಾಲಿ ಇರುವ ಮಿಕ್ಕುಳಿದ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳಿಯ) ವೃಂದದ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಸರ್ಕಾರದ ನಿರ್ದೇಶನದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಈ ಕೆಳಗಿನ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಮೇಲೆ ಸೂಚಿಸಿರುವ ಪ್ರತಿಯೊಂದು ಸಂಸ್ಥೆಯಲ್ಲಿನ ನೇಮಕಾತಿಯ ಹುದ್ದೆಗಳ ಹೆಸರು, ಒಟ್ಟು ಹುದ್ದೆಗಳ ಸಂಖ್ಯೆ, ಹುದ್ದೆವಾರು ಮತ್ತು ವರ್ಗವಾರು ಖಾಲಿ ಹುದ್ದೆಗಳು ಹಾಗು ವಿವಿಧ ಹುದ್ದೆಗಳಿಗೆ ನಿಗದಿಪಡಿಸಿರುವ ವಯಸ್ಸು, ಅರ್ಹತಾ ಷರತ್ತುಗಳು, ಶೈಕ್ಷಣಿಕ ಅರ್ಹತೆಗಳು, ಸರ್ಧಾತ್ಮಕ ಪರೀಕ್ಷೆಯ ಪೇಪರ್‌ಗಳು, ಆಯ್ಕೆಯ ವಿಧಾನ ಮತ್ತು ನೇಮಕಾತಿ ಹಾಗು ಇತರ ವಿವರಗಳನ್ನು ಸದ್ಯದಲ್ಲಿಯೇ ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ/ How to Apply
ಅರ್ಹ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ನಲ್ಲಿ ಸೂಕ್ತವಾದ URL ಅನ್ನು ಆಯ್ಕೆ ಮಾಡುವ ಮೂಲಕ ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ನಲ್ಲಿ ನೊಂದಣಿ ಮಾಡಿಕೊಳ್ಳಲು, ಅರ್ಜಿ ಸಲ್ಲಿಸಲು ಹಾಗು ಶುಲ್ಕ ಪಾವತಿಸಲು ವೇಳಾಪಟ್ಟಿಯನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು.
ಹತ್ತನೇ ಮುಗಿದವರಿಂದ 484 ಸಫಾಯಿ ಕರ್ಮಚಾರಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಪರೀಕ್ಷೆಯ ವೇಳಾಪಟ್ಟಿ/ Schedule of Exam:
ಈ ಅಧಿಸೂಚನೆಯಲ್ಲಿ ಸೂಚಿಸಲಾಗಿರುವ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು 2024 ರ ಏಪ್ರಿಲ್ ಅಥವಾ ಜೂನ್ ಅವಧಿಯಲ್ಲಿ ನಡೆಸುವ ಸಾಧ್ಯತೆ ಇದ್ದು, ಸ್ಪರ್ಧಾತ್ಮಕ ಪರೀಕ್ಷೆಯನ್ನು ರಾಜ್ಯದಾದ್ಯಂತಾ ನಡೆಸಲಾಗುವುದು. ಅಭ್ಯರ್ಥಿಗಳು ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕು.
ಪ್ರಮುಖ ಸೂಚನೆಗಳು/ Important Instructions:
- ಕೇವಲ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವುದು, ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗುವುದು ಅಭ್ಯರ್ಥಿಗಳಿಗೆ ಈ ಮೇಲಿನ ಹುದ್ದೆಗಳಿಗೆ ನೇಮಕಾತಿಯ ಯಾವುದೇ ಹಕ್ಕನ್ನು ನೀಡುವುದಿಲ್ಲ, ನೇಮಕಾತಿಯು ಸರ್ಕಾರವು ನಿಗದಿಪಡಿಸಬಹುದಾದ ಅರ್ಹತಾ ಮಾನದಂಡಗಳಿಗೆ ಒಳಪಟ್ಟಿರುತ್ತದೆ.
- ಮೇಲಿನ ಯಾವುದೇ ನಿಯಮಗಳು & ಕಾರ್ಯವಿಧಾನಗಳಿಗೆ ಸಂಬಂಧಿಸಿದಂತೆ ವ್ಯತ್ಯಾಸ ಅಥವಾ ಅಸ್ಪಷ್ಟತೆ ಕಂಡು ಬಂದಲ್ಲಿ, ಕರ್ನಾಟಕ ನಾಗರೀಕ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಗಳು, 1977 (ತಿದ್ದುಪಡಿಗಳು) ಹಾಗು ಕರ್ನಾಟಕ ಸರ್ಕಾರದ ನೇಮಕಾತಿ ಅಧಿಸೂಚನೆಗಳು / ಆದೇಶಗಳರಲ್ಲಿರುವಂತೆ ಅನ್ವಯಿಸುತ್ತದೆ.
Important Dates/ ಪ್ರಮುಖ ದಿನಾಂಕಗಳು:
ಆನ್ಲೈನ್ ಅರ್ಜಿ ಆರಂಭವಾಗುವ ದಿನಾಂಕ: ಶೀಘ್ರದಲ್ಲೆ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಶೀಘ್ರದಲ್ಲೆ
ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: ಶೀಘ್ರದಲ್ಲೆ
Important Links/ ಪ್ರಮುಖ ಲಿಂಕುಗಳು:
ಸಂಕ್ಷಿಪ್ತ ಅಧಿಸೂಚನೆ/ Brief Notification
Pingback: KEA ಯಿಂದ 6 ಇಲಾಖೆಗಳಲ್ಲಿ ಖಾಲಿ ಇರುವ 5151 ಹುದ್ದೆಗಳಿಗೆ ಅರ್ಜಿ ಆಹ್ವಾನ: KEA 6 Department Jobs 2024 - ನವಲಗುಂದ
Pingback: ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 260 ಗ್ರೂಪ್ ಸಿ ಅಸಿಸ್ಟೆಂಟ್ ಇಂಟಲಿಜೆನ್ಸ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವ
Pingback: ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ತೆರಿಗೆ ಸಹಾಯಕ, ಇನ್ಸ್ಪೆಕ್ಟರ್ & MTS ಹುದ್ದೆಗಳಿಗೆ ಅರ್ಜಿ ಆಹ್ವಾನ- Income Tax Ja