KEA ಯಿಂದ KRIDL ನಲ್ಲಿ ಖಾಲಿ ಇರುವ SDA, FDA ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ ಕುರಿತ DV ಬಿಡುಗಡೆ: KEA KRIDL DV List 2023
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮಹತ್ವದ ಪ್ರಕಟಣೆಗಳು ಹೊರಗೆ ಬಿದ್ದಿವೆ. ಪ್ರಾಧಿಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ದಿ ನಿಯಮಿತದಿಂದ (KRIDL) ಹೊರಡಿಸಲಾಗಿದ್ದ ದ್ವಿತೀಯ ದರ್ಜೆ ಸಹಾಯಕರು, ಪ್ರಥಮ ದರ್ಜೆ ಸಹಾಯಕರು, ಜೂನಿಯರ್ ಇಂಜಿನಿಯರ್ & ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳ ಮೂಲ ದಾಖಲೆಗಳ ಅರ್ಹರಾದ ಅಭ್ಯರ್ಥಿಗಳ ಪಟ್ಟಿ & ದಿನಾಂಕವನ್ನು KEA ಯ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ದಿನಾಂಕ 12-05-2023 & 15-05-2023 ರಂದು ಕೆಇಎ ಕಛೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಯಲಿದೆ. ಡಾಕ್ಯುಮೆಂಟೇಷನ್ ವೆರಿಫಿಕೇಶನ್ ಅಭ್ಯರ್ಥಿಗಳ ಲಿಸ್ಟ್ & ದಿನಾಂಕ ಹಾಗೂ ಸೂಚನೆಗಳನ್ನು ಕೆಳಗೆ ನೀಡಿರುವ ವೆಬ್ಸೈಟ್ ಲಿಂಕ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಿ…
ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತ (ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ) ಇಲ್ಲಿ ಖಾಲಿ ಇರುವ ಸಹಾಯಕ ಅಭಿಯಂತರರು ಗ್ರೇಡ್-1 (ಸಿವಿಲ್), ಕಿರಿಯ ಅಭಿಯಂತರರು (ಸಿವಿಲ್), ಪ್ರಥಮ ದರ್ಜೆ ಸಹಾಯಕರು ಮತ್ತು ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇರ ನೇಮಕಾತಿಯ ಹುದ್ದೆಗಳಿಗೆ, ಪ್ರಾಧಿಕಾರವು ದಿನಾಂಕ 14.03.2022 ರಂದು ಅಧಿಸೂಚನೆ ಹೊರಡಿಸಿ ದಿನಾಂಕ 29.03.2022 ರಿಂದ 30.04.2022 ವರೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸ್ವೀಕರಿಸಲಾಗಿರುತ್ತದೆ. ಅರ್ಜಿ ಸಲ್ಲಿಸಲಾದ ಅಭ್ಯರ್ಥಿಗಳಿಗೆ ದಿನಾಂಕ 29.01.2023 ರಿಂದ 12.02.2023 ವರೆಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗಿದ್ದು ಅಭ್ಯರ್ಥಿಗಳ ಮಾಹಿತಿಗಾಗಿ ತಾತ್ಕಾಲಿಕ ಕೀ ಉತ್ತರಗಳನ್ನು ಪ್ರಕಟಿಸಿ ಅಭ್ಯರ್ಥಿಗಳಿಂದ ಆಕ್ಷೇಪಣೆಗಳನ್ನು ಅಹ್ವಾನಿಸಲಾಗಿತ್ತು. ಅಭ್ಯರ್ಥಿಗಳಿಂದ ಸ್ವೀಕರಿಸಲಾದ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿಯ ವರದಿಯನ್ನು ಆಧಾರಿಸಿ ಅಂತಿಮ ಕೀ ಉತ್ತರಗಳನ್ನು ಮತ್ತು ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿರುವ ಅಂಕಗಳನ್ನು ದಿನಾಂಕ 13.04.2023 ರಂದು ಪ್ರಾಧಿಕಾರದ ಅಂತರ್ಜಾಲದಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತದಿಂದ ಒದಗಿಸಲಾದ ಖಾಲಿ ಉಳಿದ ಹುದ್ದೆಗಳ ವರ್ಗೀಕರಣದಂತೆ ಹಾಗೂ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿರುವ ಅಂಕಗಳು ಮತ್ತು ಮೀಸಲಾತಿಗಳ ಅಧಾರದ ಮೇಲೆ 1:3 ಅನುಪಾತದಲ್ಲಿ ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯು ಈ ಕೆಳಗಿನಂತಿರುತ್ತದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಪ್ರಮುಖ ಸೂಚನೆಗಳು:
ಮೂಲ ದಾಖೆಗಳ ಪರಿಶೀಲನೆಗೆ ಹಾಜರಾಗುವ ಯಾವುದೇ ಅಭ್ಯರ್ಥಿಗಳಿಗೆ TA &DA ನೀಡಲಾಗುವುದಿಲ್ಲ. ದಾಖಲೆಗಳ ಪರಿಶೀಲನೆ ಮತ್ತು ನಂತರದ ನೇಮಕಾತಿ ಪ್ರಕ್ರಿಯೆಯು ಕಾಲಕಾಲಕ್ಕೆ ನೇಮಕಾತಿಯ ನಿಬಂದನೆಗಳು ಸಂಬಂಧಿತ ಸರ್ಕಾರಿ ನಿಯಮಗಳು | ಆದೇಶಗಳು / ಅಧಿಸೂಚನೆಗಳು / ಮಾನ್ಯ ನ್ಯಾಯಾಲಯ/ಗಳ ಆದೇಶದ ಷರತ್ತಿಗೆ ಒಳಪಟ್ಟಿರುತ್ತದೆ.
ಪ್ರಾಧಿಕಾರವು ನಿಗದಿ ಪಡಿಸಿದ ಹುದ್ದೆವಾರು ವೇಳಾ ಪಟ್ಟಿಯಂತೆ, ಅಭ್ಯರ್ಥಿಗಳು ನಿಗದಿತ ಸಮಯದಲ್ಲಿ ಅರ್ಜಿಯಲ್ಲಿ ನಮೂದಿಸಿರುವ ವಿದ್ಯಾರ್ಹತೆ ಹಾಗೂ ಮೀಸಲಾತಿಗಳ ಅನುಸಾರ ಕಡ್ಡಾಯವಾಗಿ ಮೂಲ ದಾಖಲೆಗಳನ್ನು ಪ್ರಾಧಿಕಾರದಲ್ಲಿ ಸಲ್ಲಿಸಿ ಪರಿಶೀಲಿಸಿಕೊಳ್ಳತಕ್ಕದ್ದು.
ಮೆರಿಟ್ ಪಟ್ಟಿಯಲ್ಲಿ ಹೆಸರಿಸಿದ ಮಾತ್ರಕ್ಕೆ ಅಭ್ಯರ್ಥಿಯು, ನೇಮಕಾತಿಗೆ ಯಾವುದೇ ಹಕ್ಕನ್ನು ಹೊಂದಿರುವುದಿಲ್ಲ, ಮತ್ತು ಅಭ್ಯರ್ಥಿತ್ವವು ಮೂಲ ದಾಖಲೆಗಳ ಪರಿಶೀಲನೆ, ಅರ್ಹತಾ ಷರತ್ತುಗಳು ಮತ್ತು ಸರ್ಕಾರ / ಸಕ್ಷಮ ಪ್ರಾಧಿಕಾರದಿಂದ ಕಾಲಕಾಲಕ್ಕೆ ಹೊರಡಿಸಲಾದ ನಿಯಮಗಳ ಷರತ್ತಿಗೆ ಒಳಪಟ್ಟಿರುತ್ತದೆ.
ಪ್ರಾಧಿಕಾರದಿಂದ ನಡೆಸಲಾಗುವ ಮೂಲ ದಾಖಲೆಗಳ ಪರಿಶೀಲನೆಗೆ ಗೈರು ಹಾಜರಾದಲ್ಲಿ ಮತ್ತೊಮ್ಮೆ ಮೂಲ ದಾಖಲೆಗಳ ಪರಿಶೀಲನೆಗೆ ಕಾಲಾವಕಾಶ ನೀಡಲಾಗುವುದಿಲ್ಲ.
Important Links
Download the Documents Verification List
Pingback: KEA ಯಿಂದ KRIDL ನಲ್ಲಿ ಖಾಲಿ ಇರುವ SDA, FDA ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ ಕುರಿತ DV ಬಿಡುಗಡೆ: KEA KRIDL DV ಪಟ್ಟಿ 2023 - Channagiri