KPSC ಯಿಂದ ಗ್ರೂಪ್ ಬಿ & ಸಿ ಹುದ್ದೆಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಿ ಅರ್ಜಿ ಸಲ್ಲಿಸಲು ಮತ್ತೊಂದು ಅವಕಾಶ- KPSC Grp B & C Age relaxation notice 2024
ಕರ್ನಾಟಕ ಲೋಕಸೇವಾ ಆಯೋಗದಿಂದ ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳು/ ಸಂಸ್ಥೆಗಳಲ್ಲಿ ಖಾಲಿ ಗ್ರೂಪ್ ಬಿ ಮತ್ತು ಸಿ ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಆ ಎಲ್ಲ ನೇಮಕಾತಿಗಳಿಗೆ ಗರಿಷ್ಟ ವಯೋಮಿತಿಯಲ್ಲಿ 03 ವರ್ಷಗಳ ಸಡಿಲಿಕೆ ಮಾಡಿ ಸರ್ಕಾರವು ಅಧಿಸೂಚನೆ ಹೊರಡಿಸಿರುವ ಪ್ರಯುಕ್ತ ಮುಂದೆ ನಡೆಯಲಿದ್ದ ಎಲ್ಲ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ತಡೆಹಿಡಿದಿದೆ. ಆ ಎಲ್ಲ ನೇಮಕಾತಿಗಳಿಗೆ ಸರ್ಕಾರದ ಅಧಿಸೂಚನೆಯ ಪ್ರಕಾರ ಅರ್ಹರಿರುವ ಎಲ್ಲ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಮತ್ತೊಂದು ಅವಕಾಶ ನೀಡಲಾಗುವುದು ಎಂದು ಆಯೋಗವು ತನ್ನಪ್ರಕಟಣೆಯಲ್ಲಿ ತಿಳಿಸಿದೆ.
SBI ನಲ್ಲಿ ಖಾಲಿ ಇರುವ 1511 ಸ್ಪೆಷಾಲಿಸ್ಟ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕರ್ನಾಟಕ ಲೋಕಸೇವಾ ಆಯೋಗದಿಂದ ದಿನಾಂಕ 13-03-2024ರನ್ವಯ ಅಧಿಸೂಚಿಸಿರುವ ಉಳಿಕೆ ಮೂಲ ವೃಂದದಲ್ಲಿನ ವಿವಿಧ ಗ್ರೂಪ್ – ಬಿ ಹುದ್ದೆಗಳಿಗೆ ದಿನಾಂಕ:14-09-2024 ಮತ್ತು 15-09-2024ರಂದು ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಿ ಅಭ್ಯರ್ಥಿಗಳನ್ನು ಪರೀಕ್ಷಾ ಉಪ ಕೇಂದ್ರಗಳಿಗೆ ಹಂಚಿಕೆ ಮಾಡಲಾಗಿತ್ತು.
RDPR ಇಲಾಖೆ & ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 1000 SDA & FDA ಹುದ್ದೆಗಳ ಭರ್ತಿಗೆ ಅಧಿಸೂಚನೆ
ಈ ನಡುವೆ ದಿನಾಂಕ: 10-09-2024ರ ಕರ್ನಾಟಕ ಸರ್ಕಾರದ ನಡವಳಿಗಳಲ್ಲಿ “ ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಈಗಾಗಲೇ ಹೊರಡಿಸಲಾಗಿರುವ ಅಧಿಸೂಚನೆಗಳಿಗೆ ಹಾಗೂ ಮುಂದಿನ ಒಂದು ವರ್ಷದಲ್ಲಿ ಹೊರಡಿಸಲಿರುವ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಟ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆಯನ್ನು ನೀಡಿ ಆದೇಶಿಸಿದೆ ” ಎಂದು ತಿಳಿಸಲಾಗಿರುತ್ತದೆ.
ಮೇಲ್ಕಂಡ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ದಿ:13-03-2024ರನ್ವಯ ಅಧಿಸೂಚಿಸಿರುವ ಎಲ್ಲಾ ಹುದ್ದೆಗಳಿಗೂ ವಯೋಮಿತಿ ಸಡಿಲಿಕೆ ಅನ್ವಯಿಸಿ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಬೇಕಾಗಿರುತ್ತದೆ.
ಆದ್ದರಿಂದ ದಿನಾಂಕ:14-09-2024 ರ ಕನ್ನಡ ಭಾಷಾ ಪರೀಕ್ಷೆ ಮತ್ತು ದಿನಾಂಕ: 15-09-2024ರ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಸದರಿ ಅಧಿಸೂಚನೆಯಲ್ಲಿನ ಹುದ್ದೆಗಳಿಗೆ ಇತರೆ ದಿನಾಂಕಗಳಲ್ಲಿ ನಿಗದಿಪಡಿಲಾಗಿದ್ದ ನಿರ್ದಿಷ್ಟ ಪತ್ರಿಕೆಗಳ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸಹ ಮುಂದೂಡಲಾಗಿದೆ.
ಸರ್ಕಾರದ ಆದೇಶದಂತೆ ವಯೋಮಿತಿ ಸಡಿಲಿಕೆ ನೀಡಿ, ಅಭ್ಯರ್ಥಿಗಳಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಕಾಲಾವಾಕಾಶ ಮುಕ್ತಾಯವಾದ ನಂತರ ಪರಿಷ್ಕೃತ ಪರೀಕ್ಷಾ ದಿನಾಂಕಗಳನ್ನು ತಿಳಿಸಲಾಗುವುದು.
Important Links/ ಪ್ರಮುಖ ಲಿಂಕುಗಳು:
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಈ ಮಾಹಿತಿಯು ಕರ್ನಾಟಕದ ಅಭ್ಯರ್ಥಿಗಳಿಗೆ ಉಪಯುಕ್ತವಾಗಿರಬಹುದು. ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.