KPSC ಯಿಂದ ವಿದ್ಯುತ್ ಪರಿವೀಕ್ಷಣಾಲಯದಲ್ಲಿನ ಸಹಾಯಕ ವಿದ್ಯುತ್ ಪರಿವೀಕ್ಷಕರು ನೇಮಕಾತಿ ಕುರಿತಂತೆ ಮಹತ್ವದ ನೋಟೀಸ್ ಬಿಡುಗಡೆ: KPSC Important Notice Regarding Assistant Electrical Inspector Rect. 2023
ಕರ್ನಾಟಕ ಲೋಕಸೇವಾ ಆಯೋಗದಿಂದ ವಿದ್ಯುತ್ ಪರಿವೀಕ್ಷಣಾಲಯಲ್ಲಿನ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮಹತ್ವದ ಪ್ರಕಟಣೆಗಳು ಹೊರಗೆ ಬಿದ್ದಿವೆ. ಆಯೋಗದಿಂದ ಅಧಿಸೂಚನೆ ಹೊರಡಿಸಲಾಗಿದ್ದ ವಿದ್ಯುತ್ ಪರಿವೀಕ್ಷಣಾಲಯದಲ್ಲಿ ಖಾಲಿ ಇರುವ ಸಹಾಯಕ ವಿದ್ಯುತ್ ಪರಿವೀಕ್ಷಕರು ಹುದ್ದೆಗಳ ಪರಿಷ್ಕೃತ ಕೀ ಉತ್ತರಗಳನ್ನು KPSC ಯ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕ ಲೋಕಸೇವಾ ಆಯೋಗದಿಂದ ವಿದ್ಯುತ್ ಪರಿವೀಕ್ಷಣಾಲಯದಲ್ಲಿ ಸಹಾಯಕ ವಿದ್ಯುತ್ ಪರಿವೀಕ್ಷಕರು ನೇಮಕಾತಿಯ ಕೀ ಉತ್ತರಗಳನ್ನು ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಿ…
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಆಯೋಗವು ದಿನಾಂಕ:04-06-2023ರಂದು ನಡೆಸಿದ ಮುಖ್ಯ ವಿದ್ಯುತ್ ಪರಿವೀಕ್ಷಣಾಲಯದಲ್ಲಿ ಸಹಾಯಕ ವಿದ್ಯುತ್ ಪರಿವೀಕ್ಷಕರು (ಆರ್.ಪಿ.ಸಿ.) ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಸಾಮಾನ್ಯ ಪತ್ರಿಕೆ (ಪತ್ರಿಕೆ-1) (ವಿಷಯ ಸಂಕೇತ-529) ಮತ್ತು ನಿರ್ದಿಷ್ಟ ಪತ್ರಿಕೆ (ಪತ್ರಿಕೆ-2) (ವಿಷಯ ಸಂಕೇತ-530)ರ ಕೀ-ಉತ್ತರಗಳನ್ನು ದಿನಾಂಕ: 05-06-2023 ರಂದು ಪ್ರಕಟಿಸಿ, ಅಭ್ಯರ್ಥಿಗಳು ಕೀ-ಉತ್ತರಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ಸಲ್ಲಿಸಲು ದಿನಾಂಕ:12-06-2023 ರವರೆಗೆ ಕಾಲಾವಕಾಶವನ್ನು ನೀಡಲಾಗಿತ್ತು.
ಸಾಮಾನ್ಯ ಪತ್ರಿಕೆ (ಪತ್ರಿಕೆ-1) (ವಿಷಯ ಸಂಕೇತ-529) ಮತ್ತು ನಿರ್ದಿಷ್ಟ ಪತ್ರಿಕೆ (ಪತ್ರಿಕೆ-2) (ವಿಷಯ ಸಂಕೇತ-530) ಗಳಿಗೆ ಸಂಬಂಧಿಸಿದಂತೆ ಅಂತಿಮವಾಗಿ ಪರಿಷ್ಕರಿಸುತ್ತಿರುವ ಕೀ-ಉತ್ತರಗಳ ವಿವರಗಳು ಈ ಕೆಳಕಂಡಂತಿದೆ: Download the below link to open revised key answer pdf