KPSC KAS Gazetted Probationary Recruitment 2024- Hall Ticket Released : Important Instructions to Candidates: Complete Details
ಕರ್ನಾಟಕ ಲೋಕಸೇವಾ ಆಯೋಗದಿಂದ (KPSC) ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳು/ ಸಂಸ್ಥೆಗಳಲ್ಲಿ ಖಾಲಿ ಗ್ರೂಪ್ ಎ ಮತ್ತು ಬಿ ಗೆಜೆಟೆಡ್ ಪ್ರೊಬೇಶನರಿ (Gazetted Proationary) 384 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಆ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯನ್ನು ದಿನಾಂಕ 27-08-2024 ರಂದು ನಡೆಸಲು ಪರೀಕ್ಷಾ ವೇಳಪಟ್ಟಿಯನ್ನು ಕರ್ನಾಟಕ ಲೋಕಸೇವಾ ಆಯೋಗವು ಬಿಡುಗಡೆಗೊಳಿಸಿತ್ತು. ಇದೀಗ ಅಭ್ಯರ್ಥಿಗಳು ಪ್ರವೇಶಪತ್ರ ಪಡೆಯಲು ಲಿಂಕ್ ಅನ್ನು ಪ್ರಕಟಿಸಲಾಗಿದೆ. ಪರೀಕ್ಷೆಗಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಕೆಳಗೆ ಲಭ್ಯವಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ ಪ್ರವೇಶಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
ಕರ್ನಾಟಕ ಲೋಕಸೇವಾ ಆಯೋಗದಿಂದ 400 ಗ್ರೂಪ್ ಎ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ದಿನಾಂಕ:26-02-2024 ರಲ್ಲಿ ಅಧಿಸೂಚನೆ ಹೊರಡಿಸಿದ್ದು, ಪೂರ್ವಭಾವಿ ಪರೀಕ್ಷೆಯನ್ನು ದಿನಾಂಕ: 27-08-2024ರಂದು ನಡೆಸಲು ನಿಗದಿಪಡಿಸಿರುತ್ತದೆ. ಅಭ್ಯರ್ಥಿಗಳು ಸಾಮಾಜಿಕ ಜಾಲತಾಣ ಹಾಗೂ ಇತರೆ ಯಾವುದೇ ತಪ್ಪು ಮಾಹಿತಿಗಳಿಗೆ ಮತ್ತು ಉಹಾಪೋಹಗಳಿಗೆ ಗೊಂದಲಕ್ಕೀಡಾಗದೇ ಆಯೋಗವು ಸದರಿ ನೇಮಕಾತಿಗೆ ದಿನಾಂಕ: 27-08-2024ರಂದು ನಡೆಸಲಿರುವ ಪೂರ್ವಭಾವಿ ಪರೀಕ್ಷೆಯ ಪ್ರವೇಶ ಪತ್ರವನ್ನು ಆಯೋಗದ ವೆಬ್‌ಸೈಟ್ http://kpsc.kar.nic.inನಿಂದ ದಿನಾಂಕ:16-08-2024ರ ಸಂಜೆ 6.00ರ ನಂತರ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.
ಸದರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯನ್ನು ವಸ್ತುನಿಷ್ಠ ಬಹು ಆಯ್ಕೆ ಮಾದರಿಯಲ್ಲಿ ನಡೆಸಲಾಗುವುದು. ಸದರಿ ಪರೀಕ್ಷೆಯ ವೇಳಾಪಟ್ಟಿಯು ಆಯೋಗದ ವೆಬ್‌ಸೈಟ್‌ನಲ್ಲಿ ಲಭ್ಯವಿರುತ್ತದೆ. ಸದರಿ ಪರೀಕ್ಷೆಯ ವೇಳಾಪಟ್ಟಿಯಲ್ಲಿ ಯಾವುದೇ ರೀತಿಯ ಬದಲಾವಣೆಗಳು ಇರುವುದಿಲ್ಲ. ಈ ಮಾಹಿತಿಯನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಿದೆ.
ವಿಶೇಷ ಸೂಚನೆ:
- ಸದರಿ ನೇಮಕಾತಿಗೆ ಅರ್ಜಿ ಸಲ್ಲಿಸುವ ಸಮಯದಲ್ಲಿ ಪೂರ್ವಭಾವಿ ಪರೀಕ್ಷೆ ಬರೆಯಲು ಒಟ್ಟು 416 ಅಂಗವಿಕಲ ಅಭ್ಯರ್ಥಿಗಳು ಲಿಪಿಕಾರರ ಸಹಾಯವನ್ನು ಕೋರಿರುತ್ತಾರೆ. ಅದರಲ್ಲಿ ಒಟ್ಟು 157 ಅಂಗವಿಕಲ ಅಭ್ಯರ್ಥಿಗಳು ಆಯೋಗದ ವತಿಯಿಂದ ಲಿಪಿಕಾರರನ್ನು ಒದಗಿಸುವಂತೆ ಕೋರಿದ್ದು, ಅವರ ಕೋರಿಕೆಯಂತೆ ಲಿಪಿಕಾರರ ಸೌಲಭ್ಯವನ್ನು ಒದಗಿಸಲಾಗುವುದು.
- ಇನ್ನುಳಿದ 259 ಅಂಗವಿಕಲ ಅಭ್ಯರ್ಥಿಗಳು ತಮ್ಮದೇ ಆದ ಲಿಪಿಕಾರರನ್ನು ಕರೆತರಲು ಆಯ್ಕೆ ಮಾಡಿಕೊಂಡಿರುತ್ತಾರೆ. ಸದರಿ 259 ಅಂಗವಿಕಲ ಅಭ್ಯರ್ಥಿಗಳು ಪರೀಕ್ಷಾ ದಿನದಂದು ಪರೀಕ್ಷಾ ಉಪಕೇಂದ್ರದ ಮುಖ್ಯಸ್ಥರನ್ನು ಲಿಪಿಕಾರರ ಸಹಾಯವನ್ನು ಒದಗಿಸುವಂತೆ ಕೋರಿದ್ದಲ್ಲಿ, ಸದರಿ ವ್ಯವಸ್ಥೆಯನ್ನು ಸಹ ಕಲ್ಪಿಸಲಾಗುವುದು.
- ತಮ್ಮದೇ ಆದ ಲಿಪಿಕಾರರನ್ನು ಕರೆತರುವ ಅಂಗವಿಕಲ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರದೊಂದಿಗೆ ಲಿಪಿಕಾರರ ಪ್ರವೇಶ ಪತ್ರವನ್ನು ಸಹ ಡೌನ್ ಲೋಡ್ ಮಾಡಿಕೊಳ್ಳತಕ್ಕದ್ದು.
ದಿನಾಂಕ 27-08-2024 ರಂದು ಮುಂಜಾನೆ 10:00 ರಿಂದ 12:00 ರವರೆಗೆ ಪತ್ರಿಕೆ 1 ಪತ್ರಿಕೆಯು ಇರುತ್ತದೆ ಮತ್ತು ಅದೇ ದಿನ ಮದ್ಯಾಹ್ನಾ 02:00 ರಿಂದ 04:00 ಗಂಟೆಯವರೆಗೆ ಪತ್ರಿಕೆ 2 ಪರೀಕ್ಷೆ ನಡೆಯುತ್ತದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮಗೆ ನಿಗದಿಪಡಿಸಿದ ದಿನಾಂಕದಂದು ಪ್ರವೇಶ ಪತ್ರದಲ್ಲಿ ನೀಡಿರುವ ಸ್ಥಳದಲ್ಲಿ ಪರೀಕ್ಷೆಯನ್ನು ಬರೆಯಬಹುದು.
NWKRTC ಯಲ್ಲಿ ಖಾಲಿ ಇರುವ ಚಾಲಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NWKRTC Jobs 2024
Important Links/ ಪ್ರಮುಖ ಲಿಂಕುಗಳು:
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಈ ಮಾಹಿತಿಯು ಕರ್ನಾಟಕದ ಅಭ್ಯರ್ಥಿಗಳಿಗೆ ಉಪಯುಕ್ತವಾಗಿರಬಹುದು. ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.