ಕರ್ನಾಟಕ PWD ಇಲಾಖೆಯಲ್ಲಿ ಖಾಲಿ ಇರುವ 42 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 83000/- KPSC PWD Recruitment 2024
ಕರ್ನಾಟಕ ಲೋಕಸೇವಾ ಆಯೋಗದಿಂದ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು ಕರ್ನಾಟಕ ಸರ್ಕಾರದ ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 04-11-2024 ಆಗಿರುತ್ತದೆ. ಒಟ್ಟು 30+12(HK) ಗ್ರೂಪ್ ಎ ಹುದ್ದೆಗಳ ನೇರ ನೇಮಕಾತಿ ನಡೆಯುತ್ತಿದ್ದು ಅದರ ಅಧಿಸೂಚನೆಯನ್ನು ಆಯೋಗವು ಬಿಡುಗಡೆಗೊಳಿಸಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ 3000 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಕರ್ನಾಟಕ ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗ್ರೇಡ್ 1 (AEE) ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕರ್ನಾಟಕದ ರೇಷ್ಮೇ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಇಲಾಖೆ: ಕರ್ನಾಟಕ ಲೋಕೋಪಯೋಗಿ ಇಲಾಖೆ |
ಹುದ್ದೆಯ ಹೆಸರು: ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗ್ರೇಡ್ 1 (AEE) |
ಒಟ್ಟು ಹುದ್ದೆಗಳು: 42 ಹುದ್ದೆಗಳು |
ಕೆಲಸದ ಸ್ಥಳ: ಕರ್ನಾಟಕ |
ಹುದ್ದೆಗಳ ಹಂಚಿಕೆ/ Post Distribution:
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಉಳಿಕೆ ಮೂಲ ವೃಂದ (Non HK) | 30 ಹುದ್ದೆಗಳು |
ಸ್ಥಳೀಯ ವೃಂದ (HK) | 12 ಹುದ್ದೆಗಳು |
ಒಟ್ಟು ಹುದ್ದೆಗಳು | 42 ಹುದ್ದೆಗಳು |
ವೇತನ/ Salary:
ರೂ. 83700-155200
ಮೂಲ ವೇತನದ ಜೊತೆಗೆ ಕರ್ನಾಟಕ ಸರ್ಕಾರದ ವೇತನ ನಿಯಮಾವಳಿಗಳ ಪ್ರಕಾರ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕಾನೂನಿನ ಮೂಲಕ ಸ್ಥಾಪಿತವಾದ ಯಾವುದೇ ವಿಶ್ವವಿದ್ಯಾಲಯದಿಂದ ಕೆಳಗೆ ನೀಡಲಾದ ವಿದ್ಯಾರ್ಹತೆಯನ್ನು ಹೊಂದಿರಬೇಕು.
Degree in Civil Engineering or Construction Technology and Management or Building and Construction Technology or Civil Engineering and Planning or Civil Technology or Construction Technology or Construction Engineering and Management or Geomechanics and Structures or Structural and Foundation Engineering or Structural Engineering and Construction
ಅರ್ಜಿ ಶುಲ್ಕ/ Application Fees:
ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ : ರೂ. 600/-
ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ: ರೂ. 300/-
ಪ.ಜಾ/ ಪಪಂ/ ಕೆ1 / ಅಂಗವಿಕಲ ಸೇರಿದ ಅಭ್ಯರ್ಥಿಗಳಿಗೆ : ಶುಲ್ಕ ವಿನಾಯಿತಿ
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. 50/-
ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿಂಗ್/ ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಯುಪಿಐ ಬಳಸಿಕೊಂಡು ಆನ್ಲೈನ್ ಮೂಲಕ ಪಾವತಿ ಮಾಡಬಹುದು.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ
ಸ್ಪರ್ಧಾತ್ಮಕ ಪರೀಕ್ಷೆಯ & ವ್ಯಕ್ತಿತ್ವ ಪರೀಕ್ಷೆ ಇರುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಯು 500 ಅಂಕಗಳನ್ನು ವ್ಯಕ್ತಿತ್ವ ಪರೀಕ್ಷೆಯು 25 ಅಂಕಗಳನ್ನು ಹೊಂದಿರುತ್ತದೆ
ಪರೀಕ್ಷೆಯಲ್ಲಿ ಋಣಾತ್ಮಕ ಮೌಲ್ಯಮಾಪನವಿದ್ದು ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದು ಭಾಗ ಅಂಕಗಳನ್ನು ಕಳೆಯಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 03.10.2024 ರಿಂದ 04.11.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಆಯೋಗದ ವೆಬ್ ಸೈಟ್ www.kpsc.kar.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ..
247 ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಹುದ್ದೆಗಳಿಗೆ ಮತ್ತೆ ಅರ್ಜಿ ಆಹ್ವಾನ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 03-10-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04-11-2024
ಅರ್ಜಿ ಪಾವತಿಸುವ ಪ್ರಾರಂಭದ ದಿನಾಂಕ: 04-11-2024
Important Links/ ಪ್ರಮುಖ ಲಿಂಕುಗಳು:
ಅಧಿಸೂಚನೆ/ Notification: Non HK & HK