ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 288 ಸಹಾಯಕ ಅಭಿಯಂತರರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ KPSC ಯಿಂದ ಅರ್ಹತಾ ಪಟ್ಟಿ ಬಿಡುಗಡೆಯಾಗಿದೆ| KPSC RDWSD Recruitment Eligibility List 2023
ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮಹತ್ವದ ಪ್ರಕಟಣೆಗಳು ಹೊರಗೆ ಬಿದ್ದಿವೆ. ಆಯೋಗದಿಂದ ಅಧಿಸೂಚನೆ ಹೊರಡಿಸಲಾಗಿದ್ದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಸಹಾಯಕ ಇಂಜಿನೀಯರ್ (ಗ್ರೇಡ್-1) 229+59(ಹೈ.ಕ.) ಹುದ್ದೆಗಳ ನೇಮಕಾತಿ ಸಂಬಂಧ ಮೂಲ ದಾಖಲೆಗಳ ಪರಿಶೀಲನೆಗಾಗಿ ಅರ್ಹತೆ ಪಡೆದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ.
ದಿನಾಂಕ 21-02-2022 ರಲ್ಲಿ ಅಧಿಸೂಚಿಸಲಾದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಸಹಾಯಕ ಇಂಜಿನೀಯರ್ (ಗ್ರೇಡ್-1) 229+59(ಹೈ.ಕ.) ಹುದ್ದೆಗಳ ನೇಮಕಾತಿ ಸಂಬಂಧ ಮೂಲ ದಾಖಲೆಗಳ ಪರಿಶೀಲನೆಗಾಗಿ 1:3ರ ಅನುಪಾತದಲ್ಲಿ ಅರ್ಹ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಈಗಾಗಲೇ ದಿನಾಂಕ:05-05-2023ರಂದು ಆಯೋಗದ ಅಂತರ್ಜಾಲದಲ್ಲಿ “https://kpsc.kar.nic.in/Lists” ರಡಿಯಲ್ಲಿ ಪ್ರಕಟಿಸಲಾಗಿದ್ದು, ಸದರಿ ಅರ್ಹತಾ ಪಟ್ಟಿಯಲ್ಲಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳಿಗೆ ದಿನಾಂಕ :22-05-2023 ರಿಂದ ದಿನಾಂಕ:24-05-2023 ರವರೆಗೆ ಮೂಲ ದಾಖಲೆಗಳ ಪರಿಶೀಲನೆಯನ್ನು ನಡೆಸಲು ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಆಯೋಗದ ವೆಬ್ ಸೈಟ್ https://kpsc.kar.nic.in/Lists ಅನ್ನು ನೋಡುವಂತೆ ಸೂಚಿಸಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಮೂಲ ದಾಖಲೆ ಪರಿಶೀಲನೆಗೆ ಸಂಬಂಧಿಸಿದ ಪ್ರಮುಖ ಸೂಚನೆಗಳು:
1) ಮೂಲ ದಾಖೆಗಳ ಪರಿಶೀಲನೆಗೆ ಹಾಜರಾಗುವ ಯಾವುದೇ ಅಭ್ಯರ್ಥಿಗಳಿಗೆ TA & ನೀಡಲಾಗುವುದಿಲ್ಲ. ದಾಖಲೆಗಳ ಪರಿಶೀಲನೆ ಮತ್ತು ನಂತರದ ನೇಮಕಾತಿ ಪ್ರಕ್ರಿಯೆಯು ಕಾಲಕಾಲಕ್ಕೆ ನೇಮಕಾತಿಯ ನಿಬಂದನೆಗಳು ಸಂಬಂಧಿತ ಸರ್ಕಾರಿ ನಿಯಮಗಳು / ಆದೇಶಗಳು / ಅಧಿಸೂಚನೆಗಳು / ಮಾನ್ಯ ನ್ಯಾಯಾಲಯ/ಗಳ ಆದೇಶದ ಷರತ್ತಿಗೆ ಒಳಪಟ್ಟಿರುತ್ತದೆ.
2) ಆಯೋಗವು ನಿಗದಿ ಪಡಿಸಿದ ಹುದ್ದೆವಾರು ವೇಳಾ ಪಟ್ಟಿಯಂತೆ, ಅಭ್ಯರ್ಥಿಗಳು ನಿಗದಿತ ಸಮಯದಲ್ಲಿ ಅರ್ಜಿಯಲ್ಲಿ ನಮೂದಿಸಿರುವ ವಿದ್ಯಾರ್ಹತೆ ಹಾಗೂ ಮೀಸಲಾತಿಗಳ ಅನುಸಾರ ಕಡ್ಡಾಯವಾಗಿ ಮೂಲ ದಾಖಲೆಗಳನ್ನು ಪ್ರಾಧಿಕಾರದಲ್ಲಿ ಸಲ್ಲಿಸಿ ಪರಿಶೀಲಿಸಿಕೊಳ್ಳತಕ್ಕದ್ದು.
3) ಅರ್ಹತಾ ಪಟ್ಟಿಯಲ್ಲಿ ಹೆಸರಿಸಿದ ಮಾತ್ರಕ್ಕೆ ಅಭ್ಯರ್ಥಿಯು, ನೇಮಕಾತಿಗೆ ಯಾವುದೇ ಹಕ್ಕನ್ನು ಹೊಂದಿರುವುದಿಲ್ಲ, ಮತ್ತು ಅಭ್ಯರ್ಥಿತ್ವವು ಮೂಲ ದಾಖಲೆಗಳ ಪರಿಶೀಲನೆ, ಅರ್ಹತಾ ಷರತ್ತುಗಳು ಮತ್ತು ಸರ್ಕಾರ / ಸಕ್ಷಮ ಪ್ರಾಧಿಕಾರದಿಂದ ಕಾಲಕಾಲಕ್ಕೆ ಹೊರಡಿಸಲಾದ ನಿಯಮಗಳ ಷರತ್ತಿಗೆ ಒಳಪಟ್ಟಿರುತ್ತದೆ.
4) ಆಯೋಗದಿಂದ ನಡೆಸಲಾಗುವ ಮೂಲ ದಾಖಲೆಗಳ ಪರಿಶೀಲನೆಗೆ ಗೈರು ಹಾಜರಾದಲ್ಲಿ ಮತ್ತೊಮ್ಮೆ ಮೂಲ ದಾಖಲೆಗಳ ಪರಿಶೀಲನೆಗೆ ಕಾಲಾವಕಾಶ ನೀಡಲಾಗುವುದಿಲ್ಲ.
ಪ್ರಮುಖ ಲಿಂಕುಗಳು/ Important Links
ಅರ್ಹತಾ ಪಟ್ಟಿ/ Eligibility Lists
ವೆಬ್ಸೈಟ್/ Website