KPSC ಯಿಂದ 1122 ಕಿರಿಯ ಸಹಾಯಕರು/ SDA ನೇಮಕಾತಿ ಕುರಿತ ಪ್ರಕಟಣೆ: Selection List & Cut Off Released
ಕರ್ನಾಟಕ ಲೋಕಸೇವಾ ಆಯೋಗದಿಂದ ಮಹತ್ವದ ಪತ್ರಿಕಾ ಪ್ರಕಟಣೆಯೊಂದು ಪ್ರಕಟವಾಗಿದೆ. ಆಯೋಗದಿಂದ ಅಧಿಸೂಚನೆ ಹೊರಡಿಸಲಾಗಿದ್ದ ವಿವಿಧ ಇಲಾಖೆಗಳ ಕಿರಿಯ ಸಹಾಯಕರು/ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ ಪರಿಷ್ಕೃತ ಅಂತಿಮ ಆಯ್ಕೆಪಟ್ಟಿಯನ್ನು KPSC ಯ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕ ಲೋಕಸೇವಾ ಆಯೋಗದಿಂದ 2020ರ ಇಸವಿಯಲ್ಲಿ ಹೊರಡಿಸಲಾಗಿದ್ದ ಅಧಿಸೂಚನೆ ಇದಾಗಿದ್ದು ಇದರ ಪರಿಷ್ಕೃತ ಅಂತಿಮ ಆಯ್ಕೆಪಟ್ಟಿ & ಕಟಾಫ್ ಗಳನ್ನು ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಿ…
ಉದ್ಯೋಗ ಮಾಹಿತಿ; KPSC ಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: 242 ಗ್ರೂಪ್ ‘ಸಿ’ ಹುದ್ದೆಗಳಿಗೆ ಅರ್ಜಿ ಆಹ್ವಾನ:
ದಿ:14-05-2020ರನ್ವಯ ಅಧಿಸೂಚಿಸಿರುವ ರಾಜ್ಯದ ವಿವಿಧ ಇಲಾಖೆಗಳಲ್ಲಿನ ಉಳಿಕೆ ಮೂಲ ವೃಂದದ-1122 ಕಿರಿಯ ಸಹಾಯಕರು/ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ ಮಾನ್ಯ ಉಚ್ಛ ನ್ಯಾಯಾಲಯದ ಮಧ್ಯಂತರ ಆದೇಶದಂತೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ನಗರಾಭಿವೃದ್ಧಿ ಇಲಾಖೆ, ಬೆಂಗಳೂರು, ಇಲ್ಲಿಗೆ ಪರಿಶಿಷ್ಟ ಜಾತಿ/ಗ್ರಾಮೀಣ ಮೀಸಲಾತಿಯ ಒಂದು ಹುದ್ದೆಯನ್ನು ಕಾಯ್ದಿರಿಸಿ, ಉಳಿದ ಹುದ್ದೆಗಳಿಗೆ ದಿ:09-01-2023ರಂದು ಅಂತಿಮ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗಿತ್ತು.
ಉದ್ಯೋಗ ಮಾಹಿತಿ: KHB Recruitment 2023- ಕರ್ನಾಟಕ ಗೃಹ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಪ್ರಸ್ತುತ ಸದರಿ ಪ್ರಕರಣಕ್ಕೆ ಮಾನ್ಯ ನಾಯಾಲಯದ ಅಂತಿಮ ಆದೇಶದಂತೆ, ಸದರಿ ಇಲಾಖೆಗೆ ಕಾಯ್ದಿರಿಸಲಾಗಿದ್ದ, ಪರಿಶಿಷ್ಟ ಜಾತಿ/ಗ್ರಾಮೀಣ ಮೀಸಲಾತಿಯ 01 ಹುದ್ದೆಗೆ ನಿಯಮಾನುಸಾರ ಪರಿಗಣಿಸಿ ಸಿದ್ಧಪಡಿಸಲಾದ ಸದರಿ ಇಲಾಖೆಯ ಪರಿಷ್ಕೃತ ಅಂತಿಮ ಆಯ್ಕೆಪಟ್ಟಿ ಹಾಗೂ ಕಟ್ಆಫ್ ಅಂಕಗಳ ಪಟ್ಟಿಯನ್ನು ಆಯೋಗದ ವೆಬ್‌ಸೈಟ್ http://kpsc.kar.nic.in ರಡಿಯಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ.
Important Links
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ
Pingback: Frozen Chicken Livers