ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ಖಾಲಿ ಇರುವ ಸಹಾಯಕರು & ಚಾಲಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KSHRC Recruitment 2024
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಸಹಾಯಕ ಕಾನೂನು ಅಧಿಕಾರಿ ಹಾಗೂ ವಾಹನ ಚಾಲಕರು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 03 ಹುದ್ದೆಗಳನ್ನು ತಾತ್ಕಾಲಿಕ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದ್ದು, ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಇಮೇಲ್ ಮುಖಾಂತರ ಅರ್ಜಿ ಸಲ್ಲಿಸಬಹುದು. ಆಸಕ್ತರು 30-09-2024 ನೇ ದಿನಾಂಕದ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 11558 ಗುಮಾಸ್ತ, ಟಿಕೆಟ್ ಕ್ಲರ್ಕ್ ಹುದ್ದೆಗಳ ಬೃಹತ್ ಭರ್ತಿಗೆ ಅರ್ಜಿ ಆಹ್ವಾನ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದಿಂದ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
KPSC ಯಿಂದ ಗ್ರೂಪ್ ಬಿ & ಸಿ ಹುದ್ದೆಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಿ ಅರ್ಜಿ ಸಲ್ಲಿಸಲು ಮತ್ತೊಂದು ಅವಕಾಶ-
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ (KSHRC)
ಹುದ್ದೆಗಳ ಹೆಸರು: ಸಹಾಯಕ ಕಾನೂನು ಅಧಿಕಾರಿ & ವಾಹನಾ ಚಾಲಕರು
ಹುದ್ದೆಗಳ ಸಂಖ್ಯೆ- 03
ಕೆಲಸದ ಸ್ಥಳ: ಕರ್ನಾಟಕ
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಕಾನೂನು ಸಹಾಯಕರು/ ಸಂಶೋಧನಾ ಸಹಾಯಕರು | 02 |
ವಾಹನಾ ಚಾಲಕರು | 01 |
ವೇತನ ಶ್ರೇಣಿ/ Salary Scale:
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದಿಂದ ನಿಯಮಾವಳಿಗಳನ್ವಯ ಮಾಸಿಕ ಕೆಳಗೆ ಪಟ್ಟಿಯಲ್ಲಿ ನೀಡಿದಂತೆ ವೇತನ ನೀಡಲಾಗುತ್ತದೆ.
ಹುದ್ದೆಗಳ ಹೆಸರು | ವೇತನ ರೂ. |
ಕಾನೂನು ಸಹಾಯಕರು/ ಸಂಶೋಧನಾ ಸಹಾಯಕರು | ರೂ. 33500/- |
ವಾಹನಾ ಚಾಲಕರು | ರೂ. 21400/- |
Education/ ವಿದ್ಯಾರ್ಹತೆ
ಕಾನೂನು ಸಹಾಯಕರು/ ಸಂಶೋಧನಾ ಸಹಾಯಕರು : ಅಂಗೀಕೃತ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಮುಗಿಸಿರಬೇಕು & ಎಲ್.ಎಲ್.ಎಮ್ ಪದವಿ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಕಾನೂನು ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು. ಕನ್ನಡ ಹಾಗೂ ಆಂಗ್ಲ ಭಾಷೆಗಳಲ್ಲಿ ಹಾಗೂ ಕಂಪ್ಯೂಟರ್ ವಿಷಯದಲ್ಲಿ ಜ್ಞಾನ ಹೊಂದಿರಬೇಕು.
ವಾಹನ ಚಾಲಕರು: 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದವರಾಗಿರಬೇಕು. ಮಾನ್ಯತೆ ಹೊಂದಿದ ಲಘು ಮೋಟಾರು ವಾಹನ ಚಾಲನಾ ಪರವಾನಗಿ ಹೊಂದಿರಬೇಕು. ಕನ್ನಡ ಓದುವ & ಬರೆಯುವ ಜ್ಞಾನ ಉಳ್ಳವರಾಗಿರಬೇಕು.
ವಯೋಮಿತಿ/ Age Limit:
ವಯೋಮಿತಿಯನ್ನು ತಿಳಿಸಿಲ್ಲ.
ಅರ್ಜಿ ಶುಲ್ಕ/ Application Fees
ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ / Selection Method
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ Application Submission
ಅರ್ಹ & ಆಸಕ್ತ ಅಭ್ಯರ್ಥಿಗಳು KSHRC ಯ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ದಿನಾಂಕ 30-09-2024 ರ ಒಳಗಾಗಿ secretary-kshrc@karnataka.gov.in ಇಮೇಲ್ ವಿಳಾಸಕ್ಕೆ ಕಳುಹಿಸಬೇಕು. ಅಥವಾ ಕೆಳಗೆ ನೀಡಲಾದ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಬೇಕು.
ಕಾರ್ಯದರ್ಶಿ
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ
5ನೇ ಹಂತ, ಬಹುಮಹಡಿ ಕಟ್ಟಡ, 3ನೇ ಮಹಡಿ
ಡಾ. ಬಿ. ಆರ್ ಅಂಬೇಡ್ಕರ್ ವೀಧಿ, ಬೆಂಗಳೂರು-560001
SBI ನಲ್ಲಿ ಖಾಲಿ ಇರುವ 1511 ಸ್ಪೆಷಾಲಿಸ್ಟ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು/ Important Dates
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ ದಿನಾಂಕ: 13-09-2024
ಅರ್ಜಿ ಸಲ್ಲಿಸುವ ಕೊನೆಯ ದಿನ: 30-09-2024
ಅಧಿಕೃತ ಲಿಂಕ್/ Official Links:
ಅರ್ಜಿ ನಮೂನೆ/ Application format