ಪ್ರಾಥಮಿಕ & ಪ್ರೌಢಶಾಲಾ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 5287 ಖಾಯಂ ಶಿಕ್ಷಕ ಹುದ್ದೆಗಳ ನೇಮಕಾತಿ ಆರಂಭ: PRT & HSTR Recruitment soon 2024
ಕರ್ನಾಟಕ ಸರ್ಕಾರದ ಪ್ರಾಥಮಿಕ & ಪ್ರೌಢಶಾಲಾ ಶಿಕ್ಷಣ ಇಲಾಖೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಪ್ರಾಥಮಿಕ, TGT & ಪ್ರೌಢಶಾಲಾ ಶಿಕ್ಷಕರ ಹುದ್ದೆಗಳ ಭರ್ತಿಗೆ ಶೀಘ್ರದಲ್ಲಿಯೇ ನೇಮಕಾತಿ ಅಧಿಸೂಚನೆ ಪ್ರಕಟವಾಗಲಿದೆ. ಇಲ್ಲಿ ಖಾಲಿ ಇರುವ 5287 ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅನುಮೋದನೆಗಾಗಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು. ಸದ್ಯ ಪ್ರಸ್ತಾವನೆಯನ್ನು ಸರ್ಕಾರ ಅನುಮೋದಿಸಿದೆ. ಆದ್ದರಿಂದ ಕರ್ನಾಟಕ ಸರ್ಕಾರದ ಪ್ರಾಥಮಿಕ & ಪ್ರೌಢಶಾಲಾ ಶಿಕ್ಷಣ ಇಲಾಖೆಯಿಂದ ಆರ್ಥಿಕ ಇಲಾಖೆಯಿಂದ ಅನುಮತಿ ಪಡೆದು ಶೀಘ್ರದಲ್ಲಿಯೇ ಅಧಿಸೂಚನೆ ಪ್ರಕಟವಾಗಲಿದೆ.
ಪಶ್ಚಿಮ ರೈಲ್ವೇಯಲ್ಲಿ ಖಾಲಿ ಇರುವ 5066 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ-
ಕರ್ನಾಟಕ ಸರ್ಕಾರದ ಪ್ರಾಥಮಿಕ & ಪ್ರೌಢಶಾಲಾ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಶಿಕ್ಷಕ ಹುದ್ದೆಗಳ ನೇಮಕಾತಿಗಾಗಿ ಶೀಘ್ರದಲ್ಲಿಯೇ ಬೃಹತ್ ಅಧಿಸೂಚನೆ ಪ್ರಕಟವಾಗಲಿದೆ. ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಹುದ್ದೆಗಳ ವಿವರ/ Post Details:
ಇಲಾಖೆ: ಕರ್ನಾಟಕ ಸರ್ಕಾರದ ಪ್ರಾಥಮಿಕ & ಪ್ರೌಢಶಾಲಾ ಶಿಕ್ಷಣ |
ಹುದ್ದೆಯ ಹೆಸರು: ಪ್ರಾಥಮಿಕ, ಟಿಜಿಟಿ & ಪ್ರೌಢಶಾಲಾ ಶಿಕ್ಷಕರು |
ಒಟ್ಟು ಹುದ್ದೆಗಳು: 5287 ಹುದ್ದೆಗಳು |
ಕೆಲಸದ ಸ್ಥಳ: ಕರ್ನಾಟಕ |
ಹುದ್ದೆಗಳ ವಿವರ:
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಪ್ರಾಥಮಿಕ (1 ರಿಂದ 5) | 4424 |
GPT (6 ರಿಂದ 8) | 78 |
PET (Grad 2) | 380 |
ಪ್ರೌಢಶಾಲಾ ಸಹ ಶಿಕ್ಷಕರು | 121 |
ಪ್ರೌಢಶಾಲಾ ದೈಹಿಕ ಶಿಕ್ಷಕರು | 216 |
ಪ್ರೌಢಶಾಲಾ ವಿಶೇಷ ಶಿಕ್ಷಕರು | 48 |
ಒಟ್ಟು ಹುದ್ದೆಗಳು | 5287 |
ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ವೇತನ ರೂ. 25000/-
ವೇತನ: ಕರ್ನಾಟಕ ಸರ್ಕಾರದ ವೇತನ ನಿಯಮಾವಳಿಗಳ ಪ್ರಕಾರ ಮೂಲವೇತನ ನಿಗದಿಯಾಗಿದೆ. ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ವಿದ್ಯಾರ್ಹತೆ: ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಪದವಿ / ಸ್ನಾತಕೋತ್ತರ ಪದವಿ ಹಾಗೂ ಡಿಎಡ್/ ಬಿಎಡ್ ವಿದ್ಯಾರ್ಹತೆಯನ್ನು ಹೊಂದಿರಬೇಕು. ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರದಿಂದ ನಡೆಸಲಾಗುವ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ಉತ್ತೀರ್ಣಗೊಳಿಸಿರಬೇಕು.
ಆಯ್ಕೆವಿಧಾನ: ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ. ಈ ಪರೀಕ್ಷೆಯು ಬಹು ಆಯ್ಕೆ ಮಾದರಿ ರೂಪದಲ್ಲಿರುತ್ತದೆ.
ಅರ್ಜಿ ಹಾಕುವ ವಿಧಾನ: ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ನಿಗದಿಪಡಿಸಿದ ದಿನಾಂಕಗಳಲ್ಲಿ ಆನ್ಲೈನ್ ಮೂಲಕ ಸಲ್ಲಿಸಬಹುದಾಗಿರುತ್ತದೆ.
ಕರ್ನಾಟಕ PWD ಇಲಾಖೆಯಲ್ಲಿ ಖಾಲಿ ಇರುವ 42 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 83000/-
Important Links/ ಪ್ರಮುಖ ಲಿಂಕುಗಳು:
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.