Grama Panchayath Secretary & SDA Recruitment- Government ordered for 6406 Recruitment in RDPR

Click here to Share:

ಗ್ರಾಮ ಪಂಚಾಯತಿ ಕಾರ್ಯದರ್ಶಿ & ಗ್ರಾಮೀಣಾಭಿವೃದ್ಧಿ ಸಹಾಯಕ (ಗ್ರೇಡ್ 2) ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಹುದ್ದೆಗಳಿಗೆ ಕಾರ್ಯಕಾರಿ ಆದೇಶದ ಮೂಲಕ ನೇಮಕಾತಿ ವಿಧಾನವನ್ನು ಮಾಡುವ ಕುರಿತು ಸರ್ಕಾರದಿಂದ ಮಹತ್ವದ ಆದೇಶ ಪ್ರಕಟವಾಗಿದೆ.

ಆರ್ಥಿಕ ಇಲಾಖೆಯ ಅಭಿಪ್ರಾಯದ ಹಿನ್ನೆಲೆಯಲ್ಲಿ ಕೋವಿಡ್-19 (ಕೊರೊನಾ) ಸಾಂಕ್ರಾಮಿಕ ರೋಗದಿಂದಾಗಿ ಗ್ರೇಡ್-2 ಗ್ರಾಮ ಪಂಚಾಯತಿ ಕಾರ್ಯದರ್ಶಿ ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗೆ ವೃಂದ ಮತ್ತು ನೇಮಕಾತಿ ನಿಯಮಗಳನ್ನಯ ಗ್ರಾಮ ಪಂಚಾಯತಿಗಳ ಬಿಲ್‌ಕಲೆಕ್ಟರ್ | ಗುಮಾಸ್ತರ ಹುದ್ದೆಯಿಂದ ಆಯ್ಕೆ ಮೂಲಕ ನೇರ ನೇಮಕಾತಿ ಮಾಡಬೇಕಾಗಿರುವುದರಿಂದ ಕೊವಿಡ್-19 ನಿಂದಾಗಿ ಉಂಟಾಗಿರುವ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ನಿಟ್ಟಿನಲ್ಲಿ ಯಾವುದೇ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವುದನ್ನು ತಡೆಹಿಡಿಯಲಾಗಿತ್ತು.

ಪ್ರಸ್ತುತ ಆರ್ಥಿಕ ಇಲಾಖೆಯು ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ (ಗ್ರೇಡ್-2) ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಸೇವೆಯೋಳಗಿನ ನೇರ ನೇಮಕಾತಿ ಕೋಟಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅವಶ್ಯಕತೆಗೆ ಅನುಗುಣವಾಗಿ ಗ್ರಾಮ ಪಂಚಾಯತಿ ಸಿಬ್ಬಂದಿಗಳಿಂದ ಲಭ್ಯವಾಗುವ ಹುದ್ದೆಗಳನ್ನು ಆಯ್ಕೆ ಮೂಲಕ ನಿಯಮಾನುಸಾರ ತುಂಬಲು ಸಹಮತಿಸಿರುತ್ತದೆ.

– ಗ್ರಾಮ ಪಂಚಾಯತಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಬಿಲ್ ಕಲೆಕ್ಟರ್‌ಗಳು ವಯೋನಿವೃತ್ತಿ ಹೊಂದುವ ಅಂಚಿನಲ್ಲಿದ್ದು ಸೇವೆಯೊಳಗೆ ನೇರ ನೇಮಕಾತಿ ಹೊಂದಲು ಅವಕಾಶ ವಂಚಿತರಾಗಲಿದ್ದು, ಮತ್ತು ಗ್ರಾಮ ಪಂಚಾಯತಿಗಳಲ್ಲಿ ಬಿಲ್ ಕಲೆಕ್ಟರ್, ಲೆಕ್ಕಿಗರು, ಗುಮಾಸ್ತರು, ಬೆರಳಚ್ಚುಗಾರ ವೃಂದದ ನೌಕರರ ಜೊತೆಗೆ ಕ್ಲರ್ಕ್‌ ಕಂ ಡಾಟಾ ಎಂಟ್ರಿ ಆಪರೇಟರ್‌ ವೃಂದದಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರನ್ನು ಕೂಡಾ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ (ಗ್ರೇಡ್-2) ಹಾಗೂ

ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಹುದ್ದೆಗಳಿಗೆ ಸೇವೆಯೊಳಗೆ ನೇರ ನೇಮಕಾತಿ ಮಾಡಲು ಅವಕಾಶ ಕಲ್ಪಿಸಬೇಕಾಗಿರುತ್ತದೆ. ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರಲು ಸಾಕಷ್ಟು ಕಾಲಾವಕಾಶ ಬೇಕಾಗಿರುವುದರಿಂದ ಕಾರ್ಯಕಾರಿ ಆದೇಶದ ಮೂಲಕ ನೇಮಕಾತಿ ವಿಧಾನವನ್ನು ನಿಗಧಿಪಡಿಸಿ ಭರ್ತಿ ಮಾಡಲು ಉದ್ದೇಶಿಸಲಾಗಿದೆ. ಈ ಹಿನ್ನಲೆಯಲ್ಲಿ ಕರ್ನಾಟಕ ಸಾಮಾನ್ಯ ಸೇವೆ (ಅಭಿವೃದ್ಧಿ ಶಾಖೆ ಮತ್ತು ಸ್ಥಳೀಯ ಆಡಳಿತ ಶಾಖೆ) (ವೃಂದ ಮತ್ತು ನೇಮಕಾತಿ) ನಿಯಮಗಳು, 2008 ಕ್ಕೆ ತಿದ್ದುಪಡಿ ತರುವುದನ್ನು ಕಾಯ್ದಿರಿಸಿ, ಕಾರ್ಯಕಾರಿ ಆದೇಶ ಹೊರಡಿಸುವ ಮೂಲಕ ಮೇಲ್ಕಂಡ ಹುದ್ದೆಗಳಿಗೆ ನೇಮಕಾತಿ ವಿಧಾನವನ್ನು ಜಾರಿಗೆ ತರಲು ಸರ್ಕಾರವು ನಿರ್ಧರಿಸಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ (ಗ್ರೇಡ್-2) ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಸೇವೆಯೊಳಗಿನ ನೇರ ನೇಮಕಾತಿ ಕೋಟಾದಲ್ಲಿ ಲಭ್ಯವಾಗುವ ಖಾಲಿ ಹುದ್ದೆಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಈ ಆದೇಶದ ಅನುಬಂಧದಲ್ಲಿ ನಮೂದಿಸಿರುವಂತೆ ನೇಮಕಾತಿ ವಿಧಾನವನ್ನು ನಿಗಧಿಪಡಿಸಿ ಸರ್ಕಾರವು ಆದೇಶಿಸಿದೆ.

Grama Panchayat Secretary and Rural Development Assistant (Grade 2)

Total Posts: 3827

 Salary scale: Rs 21,400-42,000

Eligibility Criteria:

  • Education: passed Pre University Course or equivalent  
  • Must be a computer literate.
  • In service: Must have put in a continuous service of not less than six years as Bill Collectors/ Accountants/ Clerks/ Typists/ Clerk cum Data Entry Operator in Grama Panchayats

Second Division Assistant:

Total Posts: 2579

 Salary scale: Rs 21,400-42,000

Eligibility Criteria:

  • Education: Passed PUC or 12th Class or equivalent  
  • Must be a computer literate.
  • In service: Must have put in a continuous service of not less than six years as Bill Collectors/ Accountants/ Clerks/ Typists/ Clerk cum Data Entry Operator in Grama Panchayats

Notification


Click here to Share:
Bookmark the permalink.

About sdkpscjob

www.kpscjobs.com Educator & Blogger

Leave a Reply

Your email address will not be published. Required fields are marked *