ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ PDO, GP ಕಾರ್ಯದರ್ಶಿ ಗ್ರೇಡ್ 1 & 2 ಹಾಗೂ SDAA ಹುದ್ದೆಗಳ ಭರ್ತಿ 2023- RDPR PDO Recruitment 2023

Click here to Share:

ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ PDO, GP ಕಾರ್ಯದರ್ಶಿ ಗ್ರೇಡ್ 1 & 2 ಹಾಗೂ SDAA ಹುದ್ದೆಗಳ ಭರ್ತಿ 2023- RDPR PDO SDAA Recruitment 2023

ಕರ್ನಾಟಕ ಸರ್ಕಾರದ ಉದ್ಯೋಗ ಆಕಾಂಕ್ಷಿಗಳಿಗೆ ಮತ್ತೊಂದು ಬೃಹತ್ ನೇಮಕಾತಿ ಅಧಿಸೂಚನೆ ಆರಂಭವಾಗುವ ಕುರಿತು ಕರ್ನಾಟಕ ಸರ್ಕಾರದಿಂದ ಮಹತ್ವದ ಮಾಹಿತಿ ಬಂದಿದೆ.  ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತಿ ಕಾರ್ಯದರ್ಶಿ ಗ್ರೇಡ್ 1 & ಗ್ರೇಡ್ 2 ಮತ್ತು  ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಖಾಲಿ ಹುದ್ದೆಗಳ ನೇಮಕಾತಿಗೆ ಚಾಲನೆ ದೊರೆತಿದೆ. ಈ ಹುದ್ದೆಗಳ ನೇಮಕಾತಿ ಕುರಿತಂತೆ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು.

ಹತ್ತನೇ ಮುಗಿದವರಿಗೆ ಭಾರತೀಯ ರೈಲ್ವೇಯಲ್ಲಿ ಖಾಲಿ ಇರುವ ವಿವಿಧ 3624 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: RRC WR 3624 Posts Recruitment 2023

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ. ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಡಿ ಮಂಜೂರಾಗಿರುವ 6021 ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳನ್ನು  ಉನ್ನತಿಕರಿಸಿ/ ಪುನಾರ್ ಪದನಾಮೀಕರಿಸಿ ಆದೇಶಿಸಲಾಗಿದೆ. ಇದರ ಪ್ರಕಾರ ಹಿರಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ (SPDO) (ಗ್ರೂಪ್ ಬಿ) & ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಗ್ರೂಪ್ ಸಿ) ಹುದ್ದೆಗಳನ್ನಾಗಿ ಉನ್ನತಿಕರಿಸಿ/ ಪುನಾರ್ ಪದನಾಮೀಕರಿಸಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಮಂಜೂರಾಗಿರುವ 6021 ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳನ್ನು ಈ ಕೆಳಕಂಡಂತೆ ಉನ್ನತೀಕರಿಸಿ / ಪುನರ್ ಪದನಾಮೀಕರಿಸಿ ಆದೇಶಿಸಲಾಗಿದೆ.

TIFR ಬೆಂಗಳೂರಿನಲ್ಲಿ ಖಾಲಿ ಇರುವ ಕ್ಲರ್ಕ್ & ಲೈಬ್ರೆರಿ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: TIFR Recruitment 2023

1) ವೇತನ ಶ್ರೇಣಿ ರೂ. 37,900-70,850 ರ ಗ್ರೂಪ್ “ಸಿ” ವೃಂದದ 1500 ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳನ್ನು ವೇತನ ಶ್ರೇಣಿ ರೂ.40,900-78,200 (ಗ್ರೂಪ್ ಬಿ ಕಿರಿಯ ವೃಂದ) ರಲ್ಲಿ ಉನ್ನತೀಕರಿಸಿ ಹಿರಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಎಂದು ಮರು ಪದನಾಮೀಕರಿಸಿದೆ.

2) ಉಳಿದ 4521 ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳನ್ನು ವೇತನ ಶ್ರೇಣಿ ರೂ. 37,900-70,850 (ಗ್ರೂಪ್ ಸಿ ವೃಂದಲ್ಲಿ) ಮುಂದುವರೆಸಿದೆ.

3) ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಗ್ರೂಪ್ ಸಿ) ಒಟ್ಟು ಹುದ್ದೆಗಳಲ್ಲಿ  ಶೇಕಡ 65% ಹುದ್ದೆಗಳನ್ನು ನೇರ ನೇಮಕಾತಿ ಅಂದರೇ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ತುಂಬಲಾಗುತ್ತದೆ ಹಾಗೂ ಶೇಕಡ 35% ಹುದ್ದೆಗಳನ್ನು ಬಡ್ತಿ ಮೂಲಕ ತುಂಬಲಾಗುತ್ತದೆ.

ಈ ಅರ್ಟಿಕಲ್ ನಲ್ಲಿ ಪ್ರಮುಖವಾಗಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಗ್ರೂಪ್ ಸಿ) ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಚರ್ಚಿಸಲಾಗಿದೆ.

ಹುದ್ದೆಗಳ ವಿವರ/ Post Details:

ಪಂಚಾಯತ್ ಅಭಿವೃದ್ಧಿ ಅಧಿಕಾರಿ- 727
ಗ್ರಾಮ ಪಂಚಾಯತ್ ಗ್ರೇಡ್ 1 ಕಾರ್ಯದರ್ಶಿ- 635
ಗ್ರಾಮ ಪಂಚಾಯತ್ ಗ್ರೇಡ್ 2 ಕಾರ್ಯದರ್ಶಿ- 956
ದ್ವಿತೀಯ ದರ್ಜೆ ಲೆಕ್ಕ ಸಹಾಯಕರು- 625

ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಆಡಳಿತ ಸಹಾಯಕ & ಇತರೆ ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ: ZP Administrative Assistant Recruitment 2023


ಕರ್ನಾಟಕದಾದ್ಯಂತ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಸುಮಾರು 570 ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಇತ್ತೀಚೆಗೆ ಲೋಕೋಪಯೋಗಿ ಸಚಿವರು ವಿಧಾನಸಭೆಯಲ್ಲಿ ಮಾಹಿತಿ ನೀಡಿದ್ದಾರೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಪಿಯುಸಿ/ ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಅರ್ಜಿ ಶುಲ್ಕ/ Application Fees:

ಸಾಮಾನ್ಯ & ಇತರೆ ಹಿಂದೂಳಿದ ಅಭ್ಯರ್ಥಿಗಳಿಗೆ : ಇನ್ನು ತಿಳಿದಿಲ್ಲ

ಪ.ಜಾ/ ಪಪಂ/ ಅಂಗವಿಕಲ/ ಮಾಜಿ ಸೈನಿಕ & ಎಲ್ಲ ಮಹಿಳಾ ಅಭ್ಯರ್ಥಿಗಳಿಗೆ: ಇನ್ನು ತಿಳಿದಿಲ್ಲ.

ವಯೋಮಿತಿ/ Age Limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18  ವರ್ಷ ಪೂರೈಸಿರಬೇಕು & ಗರಿಷ್ಟ 35 ವರ್ಷ ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಮಾಜಿ ಸೈನಿಕರಿಗೆ: 05 ವರ್ಷ

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ

ನೇಮಕಾತಿ ಪ್ರಾಧಿಕಾರ:

ಕರ್ನಾಟಕ ನಾಗರೀಕ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957 ರ ಷೆಡ್ಯೂಲ್ (1) ತಿದ್ದುಪಡಿ ತರುವುದನ್ನು ಬಾಕಿಯಿರಿಸಿ, ಹಿರಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳನ್ನು ರಾಜ್ಯ ವೃಂದವನ್ನಾಗಿ ಪರಿಗಣಿಸಿ ಸರ್ಕಾರವನ್ನು ನೇಮಕಾತಿ ಮತ್ತು ಪ್ರಾಧಿಕಾರವನ್ನಾಗಿ ನೇಮಿಸಿದೆ ಮತ್ತು ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳನ್ನು ರಾಜ್ಯ ವೃಂದವನ್ನಾಗಿ ಪರಿಗಣಿಸಿ ಆಯುಕ್ತರು, ಪಂಚಾಯತ್ ರಾಜ್ ರವರನ್ನು ನೇಮಕಾತಿ ಮತ್ತು ಪ್ರಾಧಿಕಾರವನ್ನಾಗಿ ನೇಮಿಸಿ ಆದೇಶಿಸಿದೆ.

When Notification/ ಯಾವಾಗ ಅಧಿಸೂಚನೆ? :

ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಗ್ರೂಪ್ ಸಿ) ಹುದ್ದೆಗಳನ್ನು ತುಂಬಲು ಸರ್ಕಾರ ಆಸಕ್ತಿಯನ್ನು ತೋರಿದ್ದು ಅದಕ್ಕಿದ್ದ ಕೇಡರ್ & ತಾಂತ್ರಿಕ ಪರಿಹರಿಸುವ ಪ್ರಯತ್ನವನ್ನು ಮಾಡಿದೆ. ಬಹುತೇಕ ಇನ್ನು ಕೆಲವೇ ತಿಂಗಳುಗಳಲ್ಲಿ ನೇಮಕಾತಿಗೆ ಚಾಲನೆ ದೊರೆಯುವ ಸಾದ್ಯತೆ ಇದೆ.

Important Links/ ಪ್ರಮುಖ ಲಿಂಕುಗಳು:

Recent Update

ಅಧಿಸೂಚನೆ/ Notification


Click here to Share:
Bookmark the permalink.

About sdkpscjob

www.kpscjobs.com Educator & Blogger

7 Responses to ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ PDO, GP ಕಾರ್ಯದರ್ಶಿ ಗ್ರೇಡ್ 1 & 2 ಹಾಗೂ SDAA ಹುದ್ದೆಗಳ ಭರ್ತಿ 2023- RDPR PDO Recruitment 2023

  1. Geeta v p says:

    Application date start yavaga agutte

Leave a Reply

Your email address will not be published. Required fields are marked *