PDO ನೇಮಕಾತಿಗೆ ಚಾಲನೆ ನೀಡಿದ ರಾಜ್ಯ ಸರ್ಕಾರ: RDPR Recruitment: Rules & Regulations- RDPR PDO Recruitment 2023

Click here to Share:

PDO ನೇಮಕಾತಿಗೆ ಚಾಲನೆ ನೀಡಿದ ರಾಜ್ಯ ಸರ್ಕಾರ: RDPR Recruitment: Rules & Regulations- RDPR PDO Recruitment 2023

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ. ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಡಿ ಮಂಜೂರಾಗಿರುವ 6021 ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳನ್ನು  ಉನ್ನತಿಕರಿಸಿ/ ಪುನಾರ್ ಪದನಾಮೀಕರಿಸಿ ಆದೇಶಿಸಲಾಗಿದೆ. ಇದರ ಪ್ರಕಾರ ಹಿರಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ (SPDO) (ಗ್ರೂಪ್ ಬಿ) & ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಗ್ರೂಪ್ ಸಿ) ಹುದ್ದೆಗಳನ್ನಾಗಿ ಉನ್ನತಿಕರಿಸಿ/ ಪುನಾರ್ ಪದನಾಮೀಕರಿಸಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಮಂಜೂರಾಗಿರುವ 6021 ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳನ್ನು ಈ ಕೆಳಕಂಡಂತೆ ಉನ್ನತೀಕರಿಸಿ / ಪುನರ್ ಪದನಾಮೀಕರಿಸಿ ಆದೇಶಿಸಲಾಗಿದೆ.

ಉದ್ಯೋಗ ಮಾಹಿತಿ: ಕರ್ನಾಟಕ ಕೈಗಾರಿಕೆ & ವಾಣಿಜ್ಯ ಇಲಾಖೆಯಲ್ಲಿ  ಸಹಾಯಕ ನಿರ್ದೇಶಕರು ಹುದ್ದೆಗಳಿಗೆ ಅರ್ಜಿ ಆಹ್ವಾನ

1) ವೇತನ ಶ್ರೇಣಿ ರೂ. 37,900-70,850 ರ ಗ್ರೂಪ್ “ಸಿ” ವೃಂದದ 1500 ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳನ್ನು ವೇತನ ಶ್ರೇಣಿ ರೂ.40,900-78,200 (ಗ್ರೂಪ್ ಬಿ ಕಿರಿಯ ವೃಂದ) ರಲ್ಲಿ ಉನ್ನತೀಕರಿಸಿ ಹಿರಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಎಂದು ಮರು ಪದನಾಮೀಕರಿಸಿದೆ.

2) ಉಳಿದ 4521 ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳನ್ನು ವೇತನ ಶ್ರೇಣಿ ರೂ. 37,900-70,850 (ಗ್ರೂಪ್ ಸಿ ವೃಂದಲ್ಲಿ) ಮುಂದುವರೆಸಿದೆ.

3) ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಗ್ರೂಪ್ ಸಿ) ಒಟ್ಟು ಹುದ್ದೆಗಳಲ್ಲಿ  ಶೇಕಡ 65% ಹುದ್ದೆಗಳನ್ನು ನೇರ ನೇಮಕಾತಿ ಅಂದರೇ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ತುಂಬಲಾಗುತ್ತದೆ ಹಾಗೂ ಶೇಕಡ 35% ಹುದ್ದೆಗಳನ್ನು ಬಡ್ತಿ ಮೂಲಕ ತುಂಬಲಾಗುತ್ತದೆ.

ಉದ್ಯೋಗ ಮಾಹಿತಿ: ಕರ್ನಾಟಕ ಆಹಾರ ಇಲಾಖೆಯಲ್ಲಿ ಖಾಲಿ ಇರುವ 386 ಕಿರಿಯ ಸಹಾಯಕ, ಲೆಕ್ಕ ಸಹಾಯಕ ಸೇರಿ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ:

ಈ ಅರ್ಟಿಕಲ್ ನಲ್ಲಿ ಪ್ರಮುಖವಾಗಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಗ್ರೂಪ್ ಸಿ) ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಚರ್ಚಿಸಲಾಗಿದೆ.

ಹುದ್ದೆಗಳ ವಿವರ/ Post Details:

ಕರ್ನಾಟಕದಾದ್ಯಂತ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಸುಮಾರು 570 ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಇತ್ತೀಚೆಗೆ ಲೋಕೋಪಯೋಗಿ ಸಚಿವರು ವಿಧಾನಸಭೆಯಲ್ಲಿ ಮಾಹಿತಿ ನೀಡಿದ್ದಾರೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಅರ್ಜಿ ಶುಲ್ಕ/ Application Fees:

ಸಾಮಾನ್ಯ & ಇತರೆ ಹಿಂದೂಳಿದ ಅಭ್ಯರ್ಥಿಗಳಿಗೆ : ಇನ್ನು ತಿಳಿದಿಲ್ಲ

ಪ.ಜಾ/ ಪಪಂ/ ಅಂಗವಿಕಲ/ ಮಾಜಿ ಸೈನಿಕ & ಎಲ್ಲ ಮಹಿಳಾ ಅಭ್ಯರ್ಥಿಗಳಿಗೆ: ಇನ್ನು ತಿಳಿದಿಲ್ಲ

ವಯೋಮಿತಿ/ Age Limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18  ವರ್ಷ ಪೂರೈಸಿರಬೇಕು & ಗರಿಷ್ಟ 35 ವರ್ಷ ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಮಾಜಿ ಸೈನಿಕರಿಗೆ: 05 ವರ್ಷ

ಉದ್ಯೋಗ ಮಾಹಿತಿ: KEA ಯಿಂದ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಖಾಲಿ ಇರುವ SDA, FDA ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ:

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ

ನೇಮಕಾತಿ ಪ್ರಾಧಿಕಾರ:

ಕರ್ನಾಟಕ ನಾಗರೀಕ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957 ರ ಷೆಡ್ಯೂಲ್ (1) ತಿದ್ದುಪಡಿ ತರುವುದನ್ನು ಬಾಕಿಯಿರಿಸಿ, ಹಿರಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳನ್ನು ರಾಜ್ಯ ವೃಂದವನ್ನಾಗಿ ಪರಿಗಣಿಸಿ ಸರ್ಕಾರವನ್ನು ನೇಮಕಾತಿ ಮತ್ತು ಪ್ರಾಧಿಕಾರವನ್ನಾಗಿ ನೇಮಿಸಿದೆ ಮತ್ತು ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳನ್ನು ರಾಜ್ಯ ವೃಂದವನ್ನಾಗಿ ಪರಿಗಣಿಸಿ ಆಯುಕ್ತರು, ಪಂಚಾಯತ್ ರಾಜ್ ರವರನ್ನು ನೇಮಕಾತಿ ಮತ್ತು ಪ್ರಾಧಿಕಾರವನ್ನಾಗಿ ನೇಮಿಸಿ ಆದೇಶಿಸಿದೆ.

ಉದ್ಯೋಗ ಮಾಹಿತಿ: ಕರ್ನಾಟಕ ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ತಾಲೂಕು ಕಲ್ಯಾಣಾಧಿಕಾರಿಗಳು( Welfare Officer) ಹುದ್ದೆಗಳಿಗೆ ಅರ್ಜಿ ಆಹ್ವಾನ

When Notification/ ಯಾವಾಗ ಅಧಿಸೂಚನೆ? :

ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಗ್ರೂಪ್ ಸಿ) ಹುದ್ದೆಗಳನ್ನು ತುಂಬಲು ಸರ್ಕಾರ ಆಸಕ್ತಿಯನ್ನು ತೋರಿದ್ದು ಅದಕ್ಕಿದ್ದ ಕೇಡರ್ & ತಾಂತ್ರಿಕ ದೋಷಗಳನ್ನು ಚುನಾವಣಾ ಪೂರ್ವದಲ್ಲಿ ಪರಿಹರಿಸುವ ಪ್ರಯತ್ನವನ್ನು ಮಾಡಿದೆ. ಬಹುತೇಕ ಇನ್ನು ಕೆಲವೇ ತಿಂಗಳುಗಳಲ್ಲಿ ನೇಮಕಾತಿಗೆ ಚಾಲನೆ ದೊರೆಯುವ ಸಾದ್ಯತೆ ಇದೆ.

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification


Click here to Share:
Tagged , , , . Bookmark the permalink.

About sdkpscjob

www.kpscjobs.com Educator & Blogger

One Response to PDO ನೇಮಕಾತಿಗೆ ಚಾಲನೆ ನೀಡಿದ ರಾಜ್ಯ ಸರ್ಕಾರ: RDPR Recruitment: Rules & Regulations- RDPR PDO Recruitment 2023

  1. Pingback: MSIL Recruitment 2023: ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಗುಮಾಸ್ತ ಹುದ್ದೆಗಳ ಭರ್ತಿಗೆ KEA ಯಿಂದ

Leave a Reply

Your email address will not be published. Required fields are marked *