ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1700 ಗ್ರಾಮ ಲೆಕ್ಕಿಗ ಹುದ್ದೆಗಳ ಭರ್ತಿ: Revenue VA Jobs 2023
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಗ್ರಾಮ ಲೆಕ್ಕಿಗರ ಹುದ್ದೆಗಳ ಬೃಹತ್ ನೇಮಕಾತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ತಿರ್ಮಾನಿಸಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ 1700 ಗ್ರಾಮ ಲೆಕ್ಕಿಗರ ನೇಮಕಾತಿ ಮಾಡಿಕೊಳ್ಳಲು ಈ ಬಾರಿ ಹೊಸ ನಿಯಮಗಳನ್ನು ರೂಪಿಸಿದೆ. ಇಲ್ಲಿಯವರೆಗೂ ಜಿಲ್ಲಾ ಹಂತದಲ್ಲಿ ನೇಮಕಾತಿ ನಡೆಯುತ್ತಿತ್ತು & ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಅಭ್ಯರ್ಥಿಗಳು ಗಳಿಸಿದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿ ತಯಾರಿಸಲಾಗುತ್ತಿತ್ತು ಆದರೆ ಕೋವಿಡ್ 19 ನಂತರದ ಕಾಲದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಬೇಕು ಎಂಬ ಒತ್ತಾಯ ಹೆಚ್ಚಾಗತೊಡಗಿತು. ಇದನ್ನು ಪರಿಗಣಿಸಿದ ರಾಜ್ಯ ಸರ್ಕಾರ ಗ್ರಾಮ ಲೆಕ್ಕಿಗರ ನೇಮಕಾತಿಗಾಗಿ ವಿಶೇಷ ನಿಯಮಾವಳಿಗಳನ್ನು ರೂಪಿಸಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವನ್ನು ಆಯ್ಕೆ ಪ್ರಾಧಿಕಾರವನ್ನಾಗಿ ನೇಮಿಸಿದೆ.
ರಾಜ್ಯದಲ್ಲಿ ಖಾಲಿ ಇರುವ 1700 ಗ್ರಾಮ ಲೆಕ್ಕಿಗರ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಶೀಘ್ರದಲ್ಲಿಯೇ ಅರ್ಜಿ ಆಹ್ವಾನಿಸಲಾಗುವುದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಉತ್ತರ ರೈಲ್ವೇಯಲ್ಲಿ ಖಾಲಿ ಇರುವ ವಿವಿಧ 3093 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಕಂದಾಯ ಇಲಾಖೆ |
ಹುದ್ದೆಗಳ ಹೆಸರು: ಗ್ರಾಮ ಲೆಕ್ಕಿಗರು |
ಒಟ್ಟು ಹುದ್ದೆಗಳು: 1700 |
ಕೆಲಸದ ಸ್ಥಳ: ವಿವಿಧ ಜಿಲ್ಲೆಗಳಲ್ಲಿ |
ಒಟ್ಟು ಹುದ್ದೆಗಳು: 2348 |
ವೇತನ ಶ್ರೇಣಿ/ Salary Scale:
ಮೂಲವೇತನ ರೂ. 21400-42000
ಮೇಲಿನ ಮೂಲವೇತನದ ಜೊತೆಗೆ ರಾಜ್ಯ ಸರ್ಕಾರದ ನಿಯಮಾವಳಿಗಳ ಅನ್ವಯ DA, HRA & ಇನ್ನಿತರ ಭತ್ಯೆಗಳು ದೊರೆಯುತ್ತವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಗ್ರಾಮ ಲೆಕ್ಕಿಗರು/ Village Accountant:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಬೋರ್ಡ್ ನಿಂದ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಮುಗಿಸಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ಅರ್ಜಿ ಶುಲ್ಕ/ Application Fees:
ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ : ರೂ. 600/-
ಪ್ರವರ್ಗ 2ಎ, 2ಬಿ, 3ಎ & 3ಬಿ ಅಭ್ಯರ್ಥಿಗಳಿಗೆ ರೂ. 300/-
ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ರೂ. 50/-
ಪ.ಜಾ/ ಪಪಂ/ ಪ್ರವರ್ಗ 1/ ಅಂಗವಿಕಲ: ಅರ್ಜಿ ಶುಲ್ಕ ಇರುವುದಿಲ್ಲ.
ವಯೋಮಿತಿ/ Age Limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 35 ವರ್ಷ ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಮಾಜಿ ಸೈನಿಕರಿಗೆ: 05 ವರ್ಷ
ಅರ್ಜಿ ಸಲ್ಲಿಸುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ನಿಗದಿಪಡಿಸಿದ ದಿನಾಂಕಗಳಂದು ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.
ಆಯ್ಕೆ ವಿಧಾನ/ Selection Method:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುತ್ತದೆ.
ಸ್ಪರ್ಧಾತ್ಮಕ ಪರೀಕ್ಷೆಯು ಬಹು ಆಯ್ಕೆ ಮಾದರಿಯ 100 ಅಂಕಗಳ ಎರಡು ಪತ್ರಿಕೆಗಳನ್ನು ಒಳಗೊಂಡಿದೆ. ಒಟ್ಟು 200 ಅಂಕಗಳಿಗೆ ಪರೀಕ್ಷೆ ಬರೆಯಬೇಕು.
ಪತ್ರಿಕೆ 1 General Knowledge, Computer Knowledge, Kannada Language & English Language ಕುರಿತ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಪ್ರತಿ ವಿಭಾಗಕ್ಕೂ 25 ಅಂಕಗಳನ್ನು ನಿಗದಿಪಡಿಸಲಾಗಿದೆ.
ಪತ್ರಿಕೆ 2 Arithmetic, Statistics, Logical Reasoning & Revenue Law ಎಂಬ 4 ವಿಭಾಗಗಳಿಗೆ ಸಂಬಂಧಿಸಿದಂತೆ ಪ್ರಶ್ನೆಗಳನ್ನು ತಯಾರಿಸಲಾಗುತ್ತದೆ. ಪ್ರತಿ ವಿಭಾಗಕ್ಕೂ 25 ಅಂಕಗಳು ಇರುತ್ತವೆ.
ಪ್ರಶ್ನೆಪತ್ರಿಕೆಯು ಕನ್ನಡ & ಇಂಗ್ಲೀಷ್ ಭಾಷೆಯಲ್ಲಿ ಮಾತ್ರ ತಯಾರಾಗುತ್ತದೆ.
ಕೊಪ್ಪಳದಲ್ಲಿ ಖಾಲಿ ಇರುವ ಗುಮಾಸ್ತ & ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು/ Important Dates:
ಆನ್ಲೈನ್ ಅರ್ಜಿ ಆರಂಭದ ದಿನಾಂಕ: ಶೀಘ್ರದಲ್ಲೆ
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: ಶೀಘ್ರದಲ್ಲೆ
Important Links/ ಪ್ರಮುಖ ಲಿಂಕುಗಳು:
Pingback: ವಿದ್ಯುನ್ಮಾನ ನಿಗಮ ನಿಯಮಿತದಲ್ಲಿ ಖಾಲಿ ಇರುವ 363 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- ECIL Recruitment Notificat
Pingback: ವಿಮಾ ಕಂಪನಿಯಲ್ಲಿ ಖಾಲಿ ಇರುವ 300 ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: UIICL Recruitment 2023 - KPSC Jobs
Pingback: บริการแทงบอลเดี่ยวราคาดีสุดในตลาด