ಕರ್ನಾಟಕ ರೆವೆನ್ಯೂ ಇಲಾಖೆಯಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಚಾಲನೆ: Revenue VAO Jobs 2024

Click here to Share:

ಕರ್ನಾಟಕ ರೆವೆನ್ಯೂ ಇಲಾಖೆಯಲ್ಲಿ ಖಾಲಿ ಇರುವ 1500 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಚಾಲನೆ: Revenue VAO Jobs 2024

ಕರ್ನಾಟಕ ಕಂದಾಯ ಇಲಾಖೆಯಲ್ಲಿ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಬೃಹತ್ ನೇಮಕಾತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ತಿರ್ಮಾನಿಸಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ 1500 ಗ್ರಾಮ ಆಡಳಿತ ಅಧಿಕಾರಿ (ಗ್ರಾಮ ಲೆಕ್ಕಿಗರ)) ನೇಮಕಾತಿ ಕ್ರಮವಹಿಸಲಾಗುತ್ತಿದೆ. ಈ ನೇಮಕಾತಿಗೆ ಸಂಬಂಧಿಸಿದಂತೆ ರೋಸ್ಟರ್ ಅನ್ನು ಅಂತಿಮಗೊಳಿಸಲಾಗಿದ್ದು, ಈ ನೇಮಕಾತಿ ಅಧಿಸೂಚನೆ ಶೀಘ್ರದಲ್ಲಿಯೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪ್ರಕಟವಾಗಲಿದೆ. ಪಿಯುಸಿ ಮುಗಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ಬರೆಯಬಹುದು. ಪ್ರಸ್ತುತ ನೇಮಕ ವಾಗಲಿರುವ ಜಿಲ್ಲಾವಾರು ಖಾಲಿ ಹುದ್ದೆಗಳ ವಿವರವನ್ನು ಬಿಡುಗಡೆಗೊಳಿಸಲಾಗಿದೆ.  ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಿಲ್ಲಾವಾರು ಹುದ್ದೆಗಳ ಮಾಹಿತಿಯನ್ನು ಪಡೆಯಬಹುದು.

ಕರ್ನಾಟಕ ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ ALO ಹುದ್ದೆಗಳ ಭರ್ತಿಗೆ ಅಧಿಸೂಚನೆ- ವೇತನ ರೂ. 40000/-

ರಾಜ್ಯದಲ್ಲಿ  ಖಾಲಿ ಇರುವ 1500 ಗ್ರಾಮ ಲೆಕ್ಕಿಗರ  ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಶೀಘ್ರದಲ್ಲಿಯೇ ಅರ್ಜಿ ಆಹ್ವಾನಿಸಲಾಗುವುದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಸುಪ್ರೀಕೋರ್ಟ್ ನಲ್ಲಿ ಖಾಲಿ ಇರುವ 90 ಗುಮಾಸ್ತ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: RDPR
ಹುದ್ದೆಗಳ ಹೆಸರು: ಗ್ರಾಮ ಆಡಳಿತ ಅಧಿಕಾರಿ
ಒಟ್ಟು ಹುದ್ದೆಗಳು: 1500
ಕೆಲಸದ ಸ್ಥಳ: ವಿವಿಧ ಜಿಲ್ಲೆಗಳಲ್ಲಿ

ವೇತನ ಶ್ರೇಣಿ:

ಮೂಲವೇತನ ರೂ. 21400-42000

ಮೇಲಿನ ಮೂಲವೇತನದ ಜೊತೆಗೆ ರಾಜ್ಯ ಸರ್ಕಾರದ ನಿಯಮಾವಳಿಗಳ ಅನ್ವಯ DA, HRA & ಇನ್ನಿತರ ಭತ್ಯೆಗಳು ದೊರೆಯುತ್ತವೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಗ್ರಾಮ ಆಡಳಿತ ಅಧಿಕಾರಿ

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಬೋರ್ಡ್ ನಿಂದ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಮುಗಿಸಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

 

ಅರ್ಜಿ ಶುಲ್ಕ/ Application Fees:

ಸಾಮಾನ್ಯ  ಅರ್ಹತಾ ಅಭ್ಯರ್ಥಿಗಳಿಗೆ : ರೂ. 600/-

ಪ್ರವರ್ಗ 2ಎ, 2ಬಿ, 3ಎ & 3ಬಿ ಅಭ್ಯರ್ಥಿಗಳಿಗೆ ರೂ. 300/-

ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ರೂ. 50/-

ಪ.ಜಾ/ ಪಪಂ/ ಪ್ರವರ್ಗ 1/ ಅಂಗವಿಕಲ: ಅರ್ಜಿ ಶುಲ್ಕ ಇರುವುದಿಲ್ಲ

ವಯೋಮಿತಿ/ Age Limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18  ವರ್ಷ ಪೂರೈಸಿರಬೇಕು & ಗರಿಷ್ಟ 35 ವರ್ಷ ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಮಾಜಿ ಸೈನಿಕರಿಗೆ: 05 ವರ್ಷ

 

ಅರ್ಜಿ ಸಲ್ಲಿಸುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ನಿಗದಿಪಡಿಸಿದ ದಿನಾಂಕಗಳಂದು ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಪ್ರಾಧಿಕಾರದ  ವೆಬ್ ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.

ಬೆಂಗಳೂರಿನ ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವ ಗ್ರೂಪ್ ಎ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಆಯ್ಕೆ ವಿಧಾನ/ Selection Method:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುತ್ತದೆ.

ಸ್ಪರ್ಧಾತ್ಮಕ ಪರೀಕ್ಷೆಯು ಬಹು ಆಯ್ಕೆ ಮಾದರಿಯ 100 ಅಂಕಗಳ ಎರಡು ಪತ್ರಿಕೆಗಳನ್ನು ಒಳಗೊಂಡಿದೆ. ಒಟ್ಟು 200 ಅಂಕಗಳಿಗೆ ಪರೀಕ್ಷೆ ಬರೆಯಬೇಕು.

ಪತ್ರಿಕೆ 1 General Knowledge, Computer Knowledge, Kannada Language & English Language ಕುರಿತ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಪ್ರತಿ ವಿಭಾಗಕ್ಕೂ 25 ಅಂಕಗಳನ್ನು ನಿಗದಿಪಡಿಸಲಾಗಿದೆ.

ಪತ್ರಿಕೆ 2 Arithmetic, Statistics, Logical Reasoning & Revenue Law ಎಂಬ 4 ವಿಭಾಗಗಳಿಗೆ ಸಂಬಂಧಿಸಿದಂತೆ ಪ್ರಶ್ನೆಗಳನ್ನು ತಯಾರಿಸಲಾಗುತ್ತದೆ. ಪ್ರತಿ ವಿಭಾಗಕ್ಕೂ 25 ಅಂಕಗಳು ಇರುತ್ತವೆ.

ಪ್ರಶ್ನೆಪತ್ರಿಕೆಯು ಕನ್ನಡ & ಇಂಗ್ಲೀಷ್ ಭಾಷೆಯಲ್ಲಿ ಮಾತ್ರ ತಯಾರಾಗುತ್ತದೆ.

ಪ್ರಮುಖ ದಿನಾಂಕಗಳು/ Important Dates:

ಆನ್ಲೈನ್ ಅರ್ಜಿ ಆರಂಭದ ದಿನಾಂಕ:  ಶೀಘ್ರದಲ್ಲೆ

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: ಶೀಘ್ರದಲ್ಲೆ

 

Important Links/ ಪ್ರಮುಖ ಲಿಂಕುಗಳು:

Notification/ ನೋಟಿಫಿಕೇಶನ್


Click here to Share:
Bookmark the permalink.

About sdkpscjob

www.kpscjobs.com Educator & Blogger